ಮನೆಗೆ ನುಗ್ಗಿ ಸೊತ್ತು ಕಳವು
Update: 2023-09-08 19:04 IST
ಕೋಟ, ಸೆ.8: ಪಾಂಡೇಶ್ವರ ಗ್ರಾಮದ ಸಾಸ್ತಾನ ಎಂಬಲ್ಲಿ ಸೆ.6ರಂದು ರಾತ್ರಿ ವೇಳೆ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸಾವಿರಾರು ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ವರದಿಯಾಗಿದೆ.
ಚಿತ್ತರಂಜನ್ ದಾಸ್ ರೈ ಎಂಬವರ ಮನೆಯ ಹಿಂಬದಿಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಮನೆಯಲ್ಲಿದ್ದ 3 ತಾಮ್ರದ ಹಂಡೆಗಳು, 2 ಹಿತ್ತಾಳೆ ಪಿರಂಗಿಗಳು, ಲೋಹದ ಕುದುರೆ, ತಾಮ್ರದ ಕೊಡಪಾನ, ಇಡ್ಲಿಯ ಅಟ್ಟೆಯನ್ನು ಕಳವು ಮಾಡಿ ಕೊಂಡು ಹೋಗಿದ್ದಾರೆ. ಇವುಗಳ ಒಟ್ಟು ಮೌಲ್ಯ 35,000ರೂ. ಎಂದು ಅಂದಾಜಿಸ ಲಾಗಿದೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.