×
Ad

ಪ್ರಧಾನಿ ಮೋದಿ ಆಗಮನ ಹಿನ್ನೆಲೆ: ಉಡುಪಿಯಲ್ಲಿ ಬಿಗಿ ಪೊಲೀಸ್ ಭದ್ರತೆ : ಎಸ್ಪಿ

Update: 2025-11-26 23:10 IST

ಸಾಂದರ್ಭಿಕ ಚಿತ್ರ (PTI)

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ

ಭದ್ರತೆಗಾಗಿ ಸುಮಾರು 3000ಕ್ಕೂ ಅಧಿಕ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. 10 ಮಂದಿ ಎಸ್ಪಿ ಹಾಗೂ ಹೆಚ್ಚುವರಿ ಎಸ್ಪಿಗಳನ್ನು ನೇಮಕ ಮಾಡಲಾಗಿದೆ. ಒಟ್ಟಾರೆ ಈ ಭದ್ರತೆ ನೇತೃತ್ವವನ್ನು ಎಸ್ ಪಿ ಜಿ ವಹಿಸಿಕೊಂಡಿದ್ದು, ಈಗಾಗಲೇ ಎಸ್‍ಪಿಜಿ ತಂಡ ಉಡುಪಿಗೆ ಆಗಮಿಸಿ ನಮ್ಮ ಪೊಲೀಸರೊಂದಿಗೆ ಕರ್ತವ್ಯ ನಿರ್ವಹಿಸುತ್ತಿದೆ.

ಈ ಬಂದೋಬಸ್ತಿಗೆ ರಾಜ್ಯದ ಎಂಟಕ್ಕೂ ಅಧಿಕ ಜಿಲ್ಲೆಯ ಪೊಲೀಸ್ ತಂಡಗಳು ಉಡುಪಿಗೆ ಆಗಮಿಸಿದೆ. ರಾಜ್ಯದ ಎಡಿಜಿಪಿ ಕಾನೂನು ಮತ್ತು ಸುವ್ಯವಸ್ಥೆ ಹಿತೇಂದ್ರ ಅವರ ನೇತೃತ್ವದಲ್ಲಿ ಐಜಿಗಳಾದ ಸಂದೀಪ್ ಪಾಟೀಲ್ ಹಾಗೂ ಚಂದ್ರಗುಪ್ತ ಮಾರ್ಗದರ್ಶನದಲ್ಲಿ ಈ ಭದ್ರತೆಯನ್ನು ಒದಗಿಸಲಾಗುತ್ತಿದೆ ಎಂದು ಎಸ್ ಪಿ ಮಾಹಿತಿ ನೀಡಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News