ಕಾಪು, ನ.22: ಕಾಪು ಬೀಚ್‌ನ ಸಮುದ್ರದಲ್ಲಿ ಇಂದು ಸಂಜೆ ಆಡುತ್ತಿದ್ದ ಇಬ್ಬರು ನೀರು ಪಾಲಾಗಿರುವ ಬಗ್ಗೆ ವರದಿಯಾಗಿದೆ.

ದಾವಣಗೆರೆ ಕುಟುಂಬ ಕಾಪು ಬೀಚ್‌ಗೆ ವಿಹಾರಕ್ಕೆ ಬಂದಿದ್ದು, ಅದರಲ್ಲಿದ್ದ ಐವರು ಯುವಕರು ಸಮುದ್ರದ ನೀರಿಗೆ ಇಳಿದು ಆಡುತ್ತಿದ್ದರೆನ್ನಲಾಗಿದೆ. ಈ ವೇಳೆ ಅವರು ಸಮುದ್ರದ ಅಲೆಗೆ ಕೊಚ್ಚಿಕೊಂಡು ಹೋಗಿದ್ದು, ಅವರಲ್ಲಿ ಮೂವರನ್ನು ರಕ್ಷಿಸಲಾಗಿದೆ. ಉಳಿದ ಇಬ್ಬರು ಓರ್ವ 20 ವರ್ಷ, ಮತ್ತೊಬ್ಬ 15 ವರ್ಷ ಬಾಲಕ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ರಕ್ಷಿಸಲ್ಪಟ್ಟ ಇಬ್ಬರು ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಅವರನ್ನು ಉಚ್ಚಿಲದ ಎಸ್‌ಡಿಪಿಐ ಅಂಬ್ಯುಲೆನ್ಸ್‌ನಲ್ಲಿ ಉಡುಪಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ನೀರುಪಾಲಾದ ಓರ್ವ ಉಡುಪಿಯಲ್ಲಿ ಇಂಜಿನಿಯರ್ ಮಾಡುತ್ತಿದ್ದು, ಆತನನ್ನು ಭೇಟಿಯಾಗಲು ದಾವಣಗೆರೆ ಕುಟುಂಬ ಉಡುಪಿಗೆ ಬಂದಿತ್ತೆನ್ನಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿರುವ ಕಾಪು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.




 


 



 



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ನಝೀರ್ ಪೊಲ್ಯ/ವಾರ್ತಾಭಾರತಿ

ಉಡುಪಿ ಜಿಲ್ಲಾ ವರದಿಗಾರರು

ನಝೀರ್ ಪೊಲ್ಯ ಅವರು ಕಳೆದ 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದಾರೆ. ಉಡುಪಿಯಲ್ಲಿ ಸಂಜೆ ಪತ್ರಿಕೆಯಲ್ಲಿ ಮಾಧ್ಯಮ ವೃತ್ತಿ ಆರಂಭಿಸಿದ ಇವರು, ಒಂದೂವರೆ ವರ್ಷಗಳ ಕಾಲ ಸ್ಥಳೀಯ ಖಾಸಗಿ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಕಳೆದ 20 ವರ್ಷಗಳಿಂದ ವಾರ್ತಾಭಾರತಿ ಪತ್ರಿಕೆಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇವರ ಹವ್ಯಾಸ ಚಿಟ್ಟೆಗಳ ಬಗ್ಗೆ ಅಧ್ಯಯನ ಹಾಗೂ ವನ್ಯಜೀವಿಗಳ ಬಗ್ಗೆ ವಿಶೇಷ ಆಸಕ್ತಿ. ಅದರೊಂದಿಗೆ ಫೋಟೋಗ್ರಫಿ ಕೂಡ ಇವರ ಆಸಕ್ತಿಯ ಕ್ಷೇತ್ರ. ಈವರೆಗೆ 250 ಪ್ರಬೇಧದ ಚಿಟ್ಟೆಗಳ ಛಾಯಾಚಿತ್ರವನ್ನು ಇವರು ಸಂಗ್ರಹಿಸಿದ್ದಾರೆ. ಇವರು ಕರ್ನಾಟಕ ಬ್ಯಾರಿ ಅಕಾಡೆಮಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು