ಉಡುಪಿ | ಸಂತೋಷ್‌ನಗರದಲ್ಲಿ ಬೆಂಕಿ ಅವಘಡ: ಹೊತ್ತಿ ಉರಿದ ಗುಜರಿ ಗೋಡೌನ್
Update: 2025-02-11 15:15 IST
ಉಡುಪಿ : ಇಲ್ಲಿನ ಅಂಬಾಗಿಲು ಸಂತೋಷ್‌ನಗರ ಎಂಬಲ್ಲಿ ಇಂದು ಮಧ್ಯಾಹ್ನದ ವೇಳೆ ಗುಜರಿ ಗೋಡೌನ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಬಗ್ಗೆ ವರದಿಯಾಗಿದೆ.
ಸ್ಥಳೀಯ ನಿವಾಸಿ ಹನೀಫ್ ಎಂಬವರ ಗುಜರಿ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಲಿನ ಎಲ್ಲ ಸೊತ್ತುಗಳು ಹೊತ್ತಿ ಉರಿಯುತ್ತಿದೆ. ಇಡೀ ಪರಿಸರದಲ್ಲಿ ದಟ್ಟ ಹೊಗೆ ಆವರಿಸಿದೆ.
ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡೆಯುತ್ತಿದ್ದಾರೆ. ಬೆಂಕಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ ಎಂದು ತಿಳಿದುಬಂದಿದೆ.