ಉಡುಪಿ | ಬೈಲೂರು ವಾಸುದೇವ ಕೃಪಾ ಆಂಗ್ಲಮಾಧ್ಯಮ ಶಾಲೆಯ 21ನೆ ವಾರ್ಷಿಕೋತ್ಸವ
ಉಡುಪಿ, ಡಿ.22: ಬೈಲೂರು ವಾಸುದೇವ ಕೃಪಾ ಆಂಗ್ಲಮಾಧ್ಯಮ ಶಾಲೆಯ ಇಪ್ಪತ್ತನೆಯ ವಾರ್ಷಿಕೋತ್ಸವ ಹಾಗೂ ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ಜರಗಿತು.
ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಹಾಗೂ ಉಡುಪಿ ಜಿಲ್ಲಾ ಭಾರತ್ ಸ್ಕೌಟ್ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ ಧ್ವಜಾರೋಹಣ ಮಾಡಿ, ಬಹುಮಾನ ವಿತರಿಸಿದರು. ಕಠಿಣ ಪರಿಶ್ರಮ ನಿತ್ಯ ಪಠ್ಯಗಳನ್ನು ಓದುವುದು ಮಾತ್ರ ವಲ್ಲದೇ ಪಠ್ಯೇತರ ಚಟುವಟಿಕೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಹಳೆ ವಿದ್ಯಾರ್ಥಿ ರಂಜನ್ ರಾವ್, ಶಿಕ್ಷಕರ ರಕ್ಷಕ ಸಂಘದ ಅಧ್ಯಕ್ಷ ದಯಾನಂದ್ ಕೋಟ್ಯಾನ್, ಶಾಲಾ ಮುಖ್ಯ ಶಿಕ್ಷಕಿ ನಿಶಾ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಸಂಚಾಲಕ ಕೆ.ಅಣ್ಣಪ್ಪ ಶೆಣೈ ವಹಿಸಿದ್ದರು.
ಶಿಕ್ಷಕ ರೋಷನ್ ವಂದಿಸಿದರು. ವಿದ್ಯಾರ್ಥಿಗಳಾದ ವಲ್ಲರೀ ಹಾಗೂ ಕೇನಿಷಾ ನಿರೂಪಿಸಿದರು. ಧ್ವಜಾರೋಹಣದ ಬಳಿಕ ಮಕ್ಕಳಿಂದ ಶಿಸ್ತಿನ ಕವಯತು, ವ್ಯಾಯಾಮ ನಡೆಯಿತು.