×
Ad

ಉಡುಪಿ | ಸಾಯಿರಾಧಾ ಪ್ರೈಡ್ ಹೌಸಿಂಗ್ ಕಾಂಪ್ಲೆಕ್ಸ್ ನಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Update: 2026-01-26 13:32 IST

ಉಡುಪಿ: ಇಲ್ಲಿನ ಬ್ರಹ್ಮಗಿರಿಯ ಸಾಯಿರಾಧಾ ಪ್ರೈಡ್ ಅಪಾರ್ಟ್ ಮೆಂಟ್ ಓನರ್ಸ್ ಅಸೋಸಿಯೇಶನ್ ವಸತಿ ಸಂಕೀರ್ಣದಲ್ಲಿ ಇಂದು 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಹಿರಿಯ ಸದಸ್ಯ ಎಂ.ಗೋಪಾಲಕೃಷ್ಣ ರಾವ್ ರಾಷ್ಟ್ರಧ್ವಜ ಅರಳಿಸಿದರು. ಅಸೋಸಿಯೇಶನ್ ಅಧ್ಯಕ್ಷ ದಿನಕರ ಅಮೀನ್ ಮಾತನಾಡಿ, ಈ ವಸತಿ ಸಮುಚ್ಚಯದ ಅಭಿವೃದ್ಧಿಯ ರೂಪುರೇಷೆಗಳನ್ನು ತಿಳಿಸಿದರು.

ಕಾರ್ಯದರ್ಶಿ ರವಿರಾಜ ನಾಯಕ್ ಸ್ವಾಗತಿಸಿ, ವಂದಿಸಿದರು. ಈ ಸಂದರ್ಭದಲ್ಲಿ ಹಾಜರಿದ್ದ ನಿವಾಸಿಗಳಿಗೆ ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News