×
Ad

ಉಡುಪಿ: ರೈಲ್ವೆ ಹಳಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Update: 2024-11-08 11:54 IST

ಸಾಂದರ್ಭಿಕ ಚಿತ್ರ 

ಉಡುಪಿ, ನ.8: ವ್ಯಕ್ತಿಯೊಬ್ಬರ ಮೃತದೇಹ ಇಂದ್ರಾಳಿಯ ರೈಲ್ವೆ ಸೇತುವೆ ಬಳಿ ಗುರುವಾರ ರಾತ್ರಿ ಪತ್ತೆಯಾಗಿದೆ.

ಮೃತರನ್ನು ಮೂಡಸಗ್ರಿಯ ನೀಲಾಧರ ನಾಯ್ಕ ಎಂದು ಗುರುತಿಸಲಾಗಿದೆ.

ರೈಲ್ವೆ ಹಳಿಯ ಮೇಲೆ ಛಿದ್ರಗೊಂಡ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದ್ದು, ಇವರು ಚಲಿಸುತ್ತಿರುವ ರೈಲಿಗೆ ಅಡ್ಡ ಬಂದು ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.

ಸಮಾಸಸೇವಕ ನಿತ್ಯಾನಂದ ಒಳಕಾಡು ಇಲಾಖೆಯ ಕರೆಗೆ ಧಾವಿಸಿ ಬಂದು, ಟಾರ್ಚ್ ಬೆಳಕಿನ ಸಹಕಾರದಿಂದ ಛಿದ್ರಗೊಂಡ ದೇಹವನ್ನು ಒಟ್ಟುಗೂಡಿಸಿ, ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಘಟಕಕ್ಕೆ ಸಾಗಿಸಲು ನೆರವಾದರು.

ಮಣಿಪಾಲ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಶ್ರವಣ ಕುಮಾರ್, ಹೆಡ್ ಕಾನ್ ಸ್ಟೇಬಲ್ ಗುರುರಾಜ್, ರೈಲ್ವೆ ಆರ್.ಪಿ.ಎಫ್. ಮಧುಸೂದನ್ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News