×
Ad

ಉಡುಪಿ| ಓದುವಂತೆ ಬುದ್ದಿ ಹೇಳಿದಕ್ಕೆ ಮನನೊಂದು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

Update: 2025-12-28 22:19 IST

ಮಣಿಪಾಲ: ಓದುವಂತೆ ಬುದ್ದಿ ಹೇಳಿದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರೇಬೆಟ್ಟು ಗ್ರಾಮದ ಬಾಲ್ಕಟ್ಟು ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಬಾಲ್ಕಟ್ಟು ನಿವಾಸಿ ಮಲ್ಲಿಕಾ ಎಂಬವರ ಮಗಳು ಸಮನ್ವಿ ಎಂದು ಗುರುತಿಸಲಾಗಿದೆ.

ಉಡುಪಿ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಎರಡನೇ ವರ್ಷದ ಪಿಯುಸಿ ವಿಧ್ಯಾಬ್ಯಾಸ ಮಾಡುತ್ತಿದ್ದ ಸಮನ್ವಿಗೆ  ಡಿ.26ರಂದು ಸಂಜೆ ವೇಳೆ ತಾಯಿ ಮುಂಬರುವ ಪರೀಕ್ಷೆಯ ಬಗ್ಗೆ ಓದಲು ಹೇಳಿದ್ದರು. ಆದರೂ ಸಮನ್ವಿ ಓದದೇ ಫೋನ್‌ನಲ್ಲಿ ಮಾತಾನಾಡುತ್ತಿದ್ದಳು. ಈ ವೇಳೆ ತಾಯಿ ಆಕೆಗೆ ಬುದ್ದಿವಾದದ ಮಾತು ಹೇಳಿದ್ದರು.

ಇದೇ ಚಿಂತೆಯಲ್ಲಿ ಸಮನ್ವಿ ಮನೆಯ ಬೆಡ್‌ ರೂಂನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಮನೆಯವರು ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಗಂಭೀರ ಸ್ಥಿತಿಯಲ್ಲಿದ್ದ ಸಮನ್ವಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  

 ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News