×
Ad

ಉಡುಪಿ: ಪಿಸ್ತೂಲಿನಿಂದ ಗುಂಡಿಕ್ಕಿ ಯುವಕನ ಹತ್ಯೆ

Update: 2024-03-03 13:22 IST

ಬ್ರಹ್ಮಾವರ, ಮಾ.3: ಮನೆಯಲ್ಲಿದ್ದ ಒಂಟಿಯಾಗಿದ್ದ ಯುವಕನನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಬ್ರಹ್ಮಾವರ ತಾಲೂಕಿನ ಹನೆಹಳ್ಳಿ ಎಂಬಲ್ಲಿ ಶನಿವಾರ ರಾತ್ರಿ ವೇಳೆ ನಡೆದಿದೆ.

ಕೊಲೆಗೀಡಾದ ಯುವಕನನ್ನು ಕೃಷ್ಣ (36) ಎಂದು ಗುರುತಿಸಲಾಗಿದೆ. ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದ ಕೃಷ್ಣ, ಕಳೆದ ರಾತ್ರಿ ಮನೆಯಲ್ಲಿ ಏಕಾಂಗಿಯಾಗಿ ಊಟ ಮಾಡುತ್ತಿದ್ದ ವೇಳೆ ಆಗಮಿಸಿದ ದುಷ್ಕರ್ಮಿಗಳು ಪಿಸ್ತೂಲಿನಿಂದ ಗುಂಡಿಕ್ಕಿ ಪರಾರಿ ಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಕೃಷ್ಣ ಸ್ಥಳದಲ್ಲಿ ಮೆತಪಟ್ಟಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ.

ಫೈರಿಂಗ್ ಶಬ್ದ ಕೇಳಿದ್ದ ನೆರೆಮನೆಯವರು, ಪಟಾಕಿಯ ಶಬ್ದವೆಂದು ಸುಮ್ಮನೆ ಇದ್ದರು. ಮುಂಜಾನೆ ಈ ಕೃತ್ಯ ಬೆಳಕಿಗೆ ಬಂದಿದೆ.

ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News