×
Ad

ಉಡುಪಿ : ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಎಬಿವಿಪಿ ಮನವಿ

Update: 2023-08-11 22:05 IST

ಕುಂದಾಪುರ, ಆ.11: ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಕೂಡಲೇ ಮರು ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿ ಉಡುಪಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರಿಗೆ ಮನವಿ ಸಲ್ಲಿಸಿದೆ.

ಪ್ರಕರಣದ ಮರು ತನಿಖೆ ನಡೆಸಿ ನೈಜ ಅಪರಾಧಿಗಳನ್ನು ಪತ್ತೆ ಮಾಡಿ ಬಂಧಿಸಿ, ಸೌಜನ್ಯಳಿಗೆ ಹಾಗೂ ನೊಂದ ಆಕೆ ಕುಟುಂಬಕ್ಕೆ ನ್ಯಾಯ ಒದಗಿಸ ಬೇಕೆಂದು ಎಬಿವಿಪಿ ಒತಾತಿಯಿಸಿದೆ. ಒಂದು ವೇಳೆ ರಾಜ್ಯ ಸರಕಾರವು ಮರು ತನಿಖೆಗೆ ಆದೇಶಿಸದೆ ನ್ಯಾಯ ಒದಗಿಸುವಲ್ಲಿ ವಿಫಲವಾದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಅದೇ ರೀತಿ ಕುಂದಾಪುರ ಎಬಿವಿಪಿ ಘಟಕದ ಕೂಡ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಮನವಿ ಸಲ್ಲಿಸಿದೆ. ಈ ಸಂದರ್ಭದಲ್ಲಿ ಎಬಿವಿಪಿ ಪ್ರಮುಖರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News