ಉಡುಪಿ: ಜಿಲ್ಲಾಸ್ಪತ್ರೆಯಿಂದ ಪರಾರಿಯಾಗಿದ್ದ ಹಲ್ಲೆ ಪ್ರಕರಣದ ಆರೋಪಿ ಬಂಧನ
Update: 2026-01-24 12:40 IST
ಉಡುಪಿ, ಜ.24: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ತೆಂಕನಿಡಿಯೂರು ನಿವಾಸಿ ಕಿರಣ್ ಪಿಂಟೋ(49) ಬಂಧಿತ ಆರೋಪಿ. ಜ.18ರಂದು ಬ್ರಹ್ಮಾವರದ ಬಾರ್ ಎದುರು ನಡೆದ ಹಲ್ಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಕಿರಣ್ ಪಿಂಟೋ, ಗಾಯಗೊಂಡು ಉಡುಪಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದನು. ಈತ ಜ.21 ರಂದು ಬೆಳಗಿನ ಜಾವ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದನು.
ಈತನಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ ಬ್ರಹ್ಮಾವರ ಪೊಲೀಸರು ಜ.24ರಂದು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.