ಉಡುಪಿ | ಅಲೆವೂರು ಗ್ರೂಪ್ ಆವಾರ್ಡ್‌ಗೆ ನಟಿ ಮಾನಸಿ ಆಯ್ಕೆ
ಉಡುಪಿ, ಡಿ.17: ಅಲೆವೂರು ಗ್ರೂಪ್ ಫಾರ್ ಎಜ್ಯುಕೇಷನ್ ವತಿಯಿಂದ ನೀಡಲಾಗುವ 2025ನೇ ಸಾಲಿನ ಅಲೆವೂರು ಗ್ರೂಪ್ ಅವಾರ್ಡ್‌ಗೆ ಭರತನಾಟ್ಯ ಕಲಾವಿದೆ ಹಾಗೂ ಚಲನಚಿತ್ರ ನಟಿ ಮಾನಸಿ ಸುಧೀರ್ ಆಯ್ಕೆಯಾಗಿದ್ದಾರೆ.
ಬಹುಮುಖ ಪ್ರತಿಭೆಯಾಗಿರುವ ಮಾನಸಿ, ಭರತನಾಟ್ಯ ವಿದುಷಿಯಾಗಿದ್ದು, ನೃತ್ಯನಿಕೇತನ ಕೊಡವೂರು ಸಂಸ್ಥೆಯ ಮೂಲಕ ಸಾವಿರಾರು ಜನರಿಗೆ ಭರತನಾಟ್ಯ ತರಬೇತಿ ನೀಡುತ್ತಿದ್ದಾರೆ. ಡಿ.20ರಂದು ಬೆಳಿಗ್ಗೆ 9.30ಕ್ಕೆ ಅಲೆವೂರಿನ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ 21ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಮಾನಸಿ ಅವರಿಗೆ ಬೆಳ್ಳಿ ಫಲಕ ಸಹಿತ ಅಲೆವೂರು ಗ್ರೂಪ್ ಪ್ರಶಸ್ತಿ ಪ್ರದಾನ ಮಾಡಲಿರುವರು.
ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್‌ನ ಪ್ರಾಂಶುಪಾಲೆ ಡಾ.ಲೀನಾ ಸಿಕ್ವೆರಾ ಮುಖ್ಯ ಅಥಿತಿಯಾಗಿ ಭಾಗವಹಿಸಲಿರುವರು. ಅಲೆವೂರು ಗ್ರೂಪ್ ಫಾರ್ ಎಜುಕೇಶನ್ ಅಧ್ಯಕ್ಷ ಅಲೆವೂರು ಗಣಪತಿ ಕಿಣಿ ಅಧ್ಯಕ್ಷತೆ ವಹಿಸಲಿರುವರು ಎಂದು ಸಂಸ್ಥೆಯ ಕಾರ್ಯದರ್ಶಿ ಎ.ದಿನೇಶ್ ಕಿಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.