×
Ad

ಉಡುಪಿ | ಡಿ.6ರಂದು ಅಖಿಲ ಭಾರತ ಗೃಹರಕ್ಷಕ ದಿನಾಚರಣೆ

Update: 2025-12-04 23:20 IST

ಸಾಂದರ್ಭಿಕ ಚಿತ್ರ

ಉಡುಪಿ, ಡಿ.4: ಜಿಲ್ಲಾ ಗೃಹರಕ್ಷಕ ದಳ ಉಡುಪಿ ಜಿಲ್ಲೆ ವತಿಯಿಂದ ಅಖಿಲ ಭಾರತ ಗೃಹರಕ್ಷಕ ದಿನಾಚರಣೆ ಕಾರ್ಯಕ್ರಮ ಡಿ.6ರಂದು ಬೆಳಗ್ಗೆ 9:30ಕ್ಕೆ ನಗರದ ಜಿಲ್ಲಾ ಗೃಹ ರಕ್ಷಕ ದಳ ಕಚೇರಿ ಆವರಣದಲ್ಲಿ ನಡೆಯಲಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಗೃಹರಕ್ಷಕ ದಳ ಜಿಲ್ಲಾ ಸಮಾದೇಷ್ಟ ಡಾ.ರೋಶನ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಆದರ್ಶ್ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಎಂಚಂದ್ರಶೇಖರ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News