ಉಡುಪಿ | ಹರಿಪ್ರಸಾದ್ ರೈಗೆ ಬಹರೈನ್ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
Update: 2025-11-30 17:08 IST
ಉಡುಪಿ, ನ.30: ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ವತಿಯಿಂದ ನ.28ರಂದು ಬಹರೈನ್ನ ದಿ ಇಂಡಿಯನ್ ಕ್ಲಬ್ ಸಭಾಂಗಣದಲ್ಲಿ ನಡೆದ ’ಕರ್ನಾಟಕ ರಾಜ್ಯೋತ್ಸವ ಸಂಭ್ರಮ 2025’ರ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಭಾರತೀಯ ರಾಯಭಾರಿ ಎಚ್.ಇ.ವಿನೋದ್ ಕೆ. ಜೇಕಬ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಬಹರೈನ್ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಉಪಾಧ್ಯಕ್ಷ ಮುಹಮ್ಮದ್ ಅಬ್ದುಲ್ ಜಬ್ಬಾರ್ ಆಲ್- ಕೂಹೆಜಿ, ಪ್ರವಾಸಿ ಭಾರತೀಯ ಪ್ರಶಸ್ತಿ ಪುರಸ್ಕೃತ ಜಿ. ಬಾಬು ರಾಜನ್, ದಿ ಇಂಡಿಯನ್ ಕ್ಲಬ್ ಅಧ್ಯಕ್ಷ ಜೋಸೆಫ್ ಜ್ವಾಯಿ, ಬಹರೈನ್ ಕ್ರಿಕೆಟ್ ಫೆಡರೇಶನ್ ಸಲಹಾ ಸಮಿತಿ ಅಧ್ಯಕ್ಷ ಮುಹಮ್ಮದ್ ಮನ್ಸೂರ್ ಕನ್ನಂಗಾರ್, ಬಹರೈನ್ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿಯ ಅಧ್ಯಕ್ಷ ರಾಜ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.