×
Ad

ಉಡುಪಿ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

Update: 2023-11-12 11:18 IST

ಉಡುಪಿ, ನ.12: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಲೆಯಾದವರನ್ನು ಹಸೀನಾ(46), ಅವರ ಮಕ್ಕಳಾದ ಅಫ್ನಾನ್(22), ಅಯ್ನಾಝ್ (20) ಮತ್ತು ಅಸೀಮ್(12) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಈ ಕೃತ್ಯ ಎಸಗಿರುವ ಮಾಹಿತಿ ಲಭ್ಯವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಅನುಮಾಸ್ಪದ ವ್ಯಕ್ತಿ ಬೋಳು ತಲೆಯವನಾಗಿದ್ದ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಡಿವೈಎಸ್ಪಿ ಆಗಮಿಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News