×
Ad

ಉಡುಪಿ | ಟ್ರಕ್ಕಿನ ಚಕ್ರದಡಿ ಸಿಲುಕಿ ಬೈಕ್ ಸವಾರ ಮೃತ್ಯು

Update: 2026-01-23 10:31 IST

ಉಡುಪಿ : ಟ್ರಕ್ಕಿನ ಚಕ್ರದಡಿ ಸಿಲುಕಿ ಬೈಕ್ ಸವಾರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಉಪ್ಪೂರು ಕೆ.‌ಜಿ ರೋಡ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಚಕ್ರದಡಿ ಸಿಲುಕಿದ ಬೈಕ್ ಸವಾರನ ದೇಹವು ಛಿದ್ರಗೊಂಡಿದ್ದು, ದೇಹದಿಂದ ರುಂಡ ಬೆರ್ಪಟ್ಟು ಚಕ್ರದಡಿ ಸಿಲುಕಿಕೊಂಡಿದೆ ಎಂದು ತಿಳಿದು ಬಂದಿದೆ.

ಮೃತ ಸವಾರ‌ ಬ್ರಹ್ಮವಾರ ಮಟಪಾಡಿಯ ನಿವಾಸಿ ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಬ್ರಹ್ಮಾವರ ಆರಕ್ಷಕ ಠಾಣೆಯ‌ ಮುಖ್ಯ ಆರಕ್ಷಕ ಮಹಾಲಿಂಗ ಮಹಜರು ಪ್ರಕ್ರಿಯೆ ನಡೆಸಿದರು. ಶವತೆರವು ಹಾಗೂ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು,‌ ಮತ್ತು ಬ್ರಹ್ಮಾವರದ ಅಂಬುಲೆನ್ಸ್ ಚಾಲಕ ನೆರವಾದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News