×
Ad

ಉಡುಪಿ: ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ ಬಿಜೆಪಿ ನೋಟಿಸ್

Update: 2024-05-23 15:13 IST

ಉಡುಪಿ:  ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ ವಿಚಾರಕ್ಕೆ  ಸಂಬಂಧಿಸಿ ಮಾಜಿ ಬಿಜೆಪಿ ಶಾಸಕ ರಘುಪತಿ ಭಟ್‌ಗೆ ಬಿಜೆಪಿಯ ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ ಮಾಡಲಾಗಿದೆ.

ಶಿಸ್ತು ಸಮಿಯ ಮುಂದೆ ಬಂಡಾಯ ಸ್ಪರ್ಧೆಗೆ ಸಂಬಂಧಿಸಿದಂತೆ ಎರಡು ದಿನಗಳ ಒಳಗಾಗಿ ಸ್ಪಷ್ಟೀಕರಣ ನೀಡುವಂತೆ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ನೋಟಿಸ್ ನಲ್ಲಿ ತಿಳಿಸಿದ್ದಾರೆ.

ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಂಡಾಯವಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್ ವಿರುದ್ಧ ಶಿಸ್ತು ಕ್ರಮ ಜರಗಿಸುವಂತೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ರಾಜ್ಯ ಘಟಕಕ್ಕೆ  ಮನವಿ ಮಾಡಲಾಗಿತ್ತು.

 



 ವಾರ್ತಾ ಭಾರತಿ ವಾಟ್ಸ್ ಆ್ಯಪ್ ಚಾನೆಲ್ ಗೆ ಸೇರಲು https://whatsapp.com/channel/0029VaA8ju86LwHn9OQpEq28 ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News