×
Ad

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Update: 2023-07-22 19:01 IST

ಉಡುಪಿ, ಜು.22: ರಾಜ್ಯ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದ ಬಳಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜನರಿಗೆ ಆಮಿಷ ಒಡ್ಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಗ್ಯಾರಂಟಿ ಮರೆತು ಜನರ ದಿಕ್ಕನ್ನು ಬೇರೆ ಕಡೆಗೆ ತೆಗೆದುಕೊಂಡು ಹೋಗುವ ಪಯತ್ನ ನಡೆಸುತ್ತಿದೆ. ಕಾಂಗ್ರೆಸ್ ಜಾತಿ ಆಧಾರದಲ್ಲಿ ಜನರನ್ನು ವಿಭಜನೆ ಮಾಡುವ ಕೆಲಸದಲ್ಲಿ ನಿರತವಾಗಿದೆ. ಭಯೋತ್ಪಾದಕರ ಬಂಧನದ ಕುರಿತು ಗೃಹ ಸಚಿವರು, ಮುಖ್ಯಮಂತ್ರಿ ಮಾತನಾಡುತ್ತಿಲ್ಲ. ರಾಜ್ಯದಲ್ಲಿ ತುಘಲಕ್ ಸರಕಾರ ಇದೆ. ಇವರ ಈ ಧೋರಣೆಗಳು ಜನರಲ್ಲಿ ಭಯವನ್ನು ಹುಟ್ಟಿಸುತ್ತಿದೆ ಎಂದು ಆರೋಪಿಸಿದರು.

ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಶಾಸಕ ಯಶ್‌ಪಾಲ್ ಸುವರ್ಣ, ಮಾಜಿ ಶಾಸಕ ರಘುಪತಿ ಭಟ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಂಗಳೂರು ಪ್ರಭಾರಿ ಉದಯ ಕುಮಾರ್ ಶೆಟ್ಟಿ ಮಾತನಾಡಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಶ್ಯಾಮಲಾ ಕುಂದರ್, ವೀಣಾ ಎಸ್. ಶೆಟ್ಟಿ, ಗೀತಾಂಜಲಿ ಸುವರ್ಣ, ನಯನಾ ಗಣೇಶ್, ದಿನಕರ ಬಾಬು, ಕುತ್ಯಾರು ನವೀನ್ ಶೆಟ್ಟಿ, ಸುಮಿತ್ರಾ ಆರ್.ನಾಯಕ್, ಸುಪ್ರಸಾದ್ ಶೆಟ್ಟಿ, ಸಲೀಂ ಅಂಬಾಗಿಲು, ದಾವೂರು ಅಬೂಬಕ್ಕರ್, ಶಿಲ್ಪಾ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News