ಉಡುಪಿ| ಮಾರ್ಗಸೂಚಿ ಪಾಲಿಸದ 23 ಬಸ್‌ಗಳ ವಿರುದ್ಧ ಪ್ರಕರಣ ದಾಖಲು

Update: 2026-08-04 21:39 IST

ಉಡುಪಿ, ಆ.4: ಉಡುಪಿ ಆರ್‌ಟಿಓ ಹಾಗೂ ಸಂಚಾರ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಮಾರ್ಗಸೂಚಿ ಪಾಲಿಸದ ಒಟ್ಟು 23 ಬಸ್‌ಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇತ್ತೀಚೆಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ರಸ್ತೆ ಸುರಕ್ಷತಾ ಸಭೆಯಲ್ಲಿ ನೀಡಲಾದ ಮಾರ್ಗಸೂಚಿಗಳನ್ನು ಬಸ್‌ಗಳು ಪಾಲಿಸುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಈ ವಿಶೇಷ ತಪಾಸಣಾ ಕಾರ್ಯಚರಣೆ ನಡೆಸಲಾಗಿದೆ.

ಉಡುಪಿ ನಗರದಲ್ಲಿ ಸೋಮವಾರ ಉಡುಪಿ ಸಂಚಾರ ಪೊಲೀಸ್ ಠಾಣೆಯಿಂದ ನಡೆದ ಕಾರ್ಯಾಚರಣೆಯಲ್ಲಿ 15 ಪ್ರಕರಣ ಹಾಗೂ ಜು.27ರಂದು ಕುಂದಾಪುರ ಸಂಚಾರ ಪೊಲೀಸ್ ಠಾಣೆಯಿಂದ ನಡೆದ ಕಾರ್ಯಾಚರಣೆಯಲ್ಲಿ 8 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಒಟ್ಟು 11,500ರೂ. ದಂಡವನ್ನು ವಸೂಲಿ ಮಾಡಲಾಗಿದೆ. ಈ ಕಾರ್ಯಚರಣೆಯನ್ನು ಮುಂದುವರಿಸಲಾಗುವುದು ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News