ಉಡುಪಿ: ಮನ್ ರೇಗಾ ಯೋಜನೆ ಹೆಸರು ಬದಲಾವಣೆ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ
ಉಡುಪಿ: ಮನ್ ರೇಗಾ ಯೋಜನೆ ಹೆಸರು ಬದಲಾವಣೆ ಮಾಡುವ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿ ಪ್ರತಿಭಟನೆ ನಡೆಸಲು ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಭವನದಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ನಿರ್ಧರಿಸಲಾಯಿತು.
ಮನ್ ರೇಗಾ ಯೋಜನೆ ಹೆಸರು ಬದಲಾವಣೆ ಮಾಡಿರುವುದರೊಂದಿಗೆ ಗ್ರಾಮೀಣ ಕಾರ್ಮಿಕರ ಉದ್ಯೋಗದ ಹಕ್ಕನ್ನು ಕಸಿದುಕೊಂಡಿದೆ. ಹೊಸ ಮಸೂದೆ ಮೂಲಕ ಕೇಂದ್ರ ಸರಕಾರ ರಾಜ್ಯಗಳ ಮೇಲೆ ಆರ್ಥಿಕ ಹೊರೆ ಹಾಕಿದೆ. ಆದುದರಿಂದ ಇದರ ವಿರುದ್ಧ ಬೂತ್, ಗ್ರಾಮೀಣ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ, ಜನಸಂಪರ್ಕ ಸಭೆ, ಪಾದ ಯಾತ್ರೆಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಜಿಲ್ಲೆಯ ಸಮಗ್ರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಇದರ ಪರಿಹಾರಕ್ಕಾಗಿ ಜಿಲ್ಲಾ ಕಾಂಗ್ರೆಸ್ ನಿಯೋಗವು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ನಿರ್ಧರಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಳ್ಳ ಬೇಕಾದ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಸಭೆಯಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕ ಗೋಪಾಲ ಪೂಜಾರಿ, ಮುಖಂಡರಾದ ವರೋನಿಕಾ ಕರ್ನೆಲಿಯೋ, ಉದಯ ಕುಮಾ ಶೆಟ್ಟಿ ಮುನಿಯಾಲು, ದಿನೇಶ್ ಹೆಗ್ಡೆ ಮೊಳಹಳ್ಳಿ, ನೀರೆ ಕೃಷ್ಣ ಶೆಟ್ಟಿ, ದಿನೇಶ್ ಪುತ್ರನ್, ಭಾಸ್ಕರ ರಾವ್ ಕಿದಿಯೂರು, ಕಿರಣ್ ಹೆಗ್ಡೆ, ಬ್ಲಾಕ್ ಅಧ್ಯಕ್ಷರು ಗಳಾದ ರಮೇಶ್ ಕಾಂಚನ್, ಸಂತೋಷ್ ಕುಲಾಲ್, ಹರಿಪ್ರಸಾದ್ ಶೆಟ್ಟಿ, ಅರವಿಂದ ಪೂಜಾರಿ, ಗೋಪಿನಾಥ್ ಭಟ್, ಶಂಕರ್ ಕುಂದರ್, ಶಬ್ಬೀರ್ ಅಹ್ಮದ್, ಕೀರ್ತಿ ಶೆಟ್ಟಿ, ಜ್ಯೋತಿ ಹೆಬ್ಬಾರ್, ಹಬೀಬ್ ಅಲಿ, ಉದ್ಯಾವರ ನಾಗೇಶ್ ಕುಮಾರ್, ಹರೀಶ್ ಶೆಟ್ಟಿ ಪಾಂಗಳ, ಕಿರಣ್ ಹೆಗ್ಡೆ, ಶರ್ಪುದ್ದೀನ್ ಶೇಖ್, ಮಹಾಬಲ ಕುಂದರ್, ಜಯ ಕುಮಾರ್, ರೋಶನ್ ಶೆಟ್ಟಿ, ಶಶಿಧರ್ ಶೆಟ್ಟಿ, ರತ್ನಾಕರ ಪೂಜಾರಿ, ಶೇಖರ ಕೋಟ್ಯಾನ್, ಕಿಶೋರ್ ಕುಮಾರ್, ಆನಂದ ಪೂಜಾರಿ, ಸತೀಶ್ ಮಂಚಿ ಮೊದಲಾದವರು ಉಪಸ್ಥಿತರಿದ್ದರು.
ಸಹಕಾರಿ ಕಾಂಗ್ರೆಸ್ ಅಧ್ಯಕ್ಷ ಅಣ್ಣಯ್ಯ ಸೇರಿಗಾರ್ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಬಿ.ನರಸಿಂಹಮೂರ್ತಿ ವಂದಿಸಿದರು.