ಉಡುಪಿ, ನ.26: ಬದುಕಿನ ಪ್ರತಿಯೊಂದು ಹೆಜ್ಜೆಯಲ್ಲೂ ಅಸಮಾನತೆ, ಅಸೃಶ್ಯತೆಯ ಅವಮಾನ ಎದುರಿಸಿದರೂ ಉನ್ನತ ಶಿಕ್ಷಣ ಪಡೆದ ಡಾ! ಬಿ.ಆರ್. ಅಂಬೇಡ್ಕರ್ ಬದುಕಿದ್ದಾಗ ಮಾತ್ರವಲ್ಲದೆ ಸಾವಿನಲ್ಲೂ ಕಾಂಗ್ರೆಸ್ ರಾಜಕಾರಣದ ಅಗೌರವವನ್ನು ತೋರಿದೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ಕೃಷ್ಣಮೂರ್ತಿ ಡಿ.ಬಿ. ಹೇಳಿದ್ದಾರೆ.

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ’ಸಂವಿಧಾನ ಗೌರವ ದಿವಸ’ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಕೇವಲ ದಲಿತರಿಗಷ್ಟೇ ಮೀಸಲು ಅಲ್ಲ. ಸಂವಿಧಾನವನ್ನು ನಾವು ಬದುಕಿನಲ್ಲಿ ಎಷ್ಟು ಅಳವಡಿಸಿದ್ದೇವೆ, ನಮ್ಮ ಅನುಕೂಲಕ್ಕಾಗಿ ಎಷ್ಟು ಬದಲಾಯಿಸಿದ್ದೇವೆ ಎಂದು ಪ್ರಶ್ನಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಅಲೆವೂರು ಮಾತನಾಡಿ, ಡಿ.1ರಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹರೀಶ್ ದ್ವಿವೇದಿ ನೇತೃತ್ವದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಉಡುಪಿಯಲ್ಲಿ ಮಂಗಳೂರು ವಿಭಾಗ ಮಟ್ಟದ ಸಂಘಟನಾತ್ಮಕ ಸಭೆ ನಡೆಯಲಿದೆ ಎಂದರು.

ಡಿ.1ರಿಂದ ಡಿ.25ರ ವರೆಗೆ ’ಸೇವಾ ಧೂತ’ ಅಭಿಯಾನ ಹಾಗೂ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ ಮತ್ತು ಬೆಲೆ ಏರಿಕೆಯನ್ನು ಖಂಡಿಸಿ ಮಂಡಲವಾರು ಬೃಹತ್ ಪ್ರತಿಭಟನಾ ಪಾದಯಾತ್ರೆ ನಡೆಯಲಿದೆ ಎಂದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ ಬೈಲೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಮಿತಿ ಸದಸ್ಯ ರತ್ನಾಕರ ಇಂದ್ರಾಳಿ ರಸ ಪ್ರಶ್ನೆ ಅವಧಿಯನ್ನು ನಡೆಸಿಕೊಟ್ಟರು.

ರಾಜ್ಯ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಸಹಿತ ಪಕ್ಷದ ಪ್ರಮುಖರು, ಬಿಜೆಪಿ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ಉಮೇಶ್ ನಾಯ್ಕ್ ಚೇರ್ಕಾಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor