×
Ad

ಉಡುಪಿ| ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ: ಆರೋಪಿ ಭರತ್ ದಾಸ್ ಗಡಿಪಾರು

Update: 2026-05-15 18:21 IST

ಉಡುಪಿ, ಮೇ 15: ಕ್ರಿಕೆಟ್ ಬೆಟ್ಟಿಂಗ್ ಪ್ರಕರಣದ ಆರೋಪಿ ಬ್ರಹ್ಮಾವರ ಮೂಡುಬಿರ್ತಿ ನಿವಾಸಿ ಭರತ್ ಜಯರಾಮ್ ದಾಸ್‌ (34) ಎಂಬಾತನನ್ನು ವಿಶೇಷ ಕಾರ್ಯಾಂಗ ದಂಡಾಧಿಕಾರಿಯಾಗಿರುವ ಉಡುಪಿ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಮೇ 14ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ.

ಭರತ್ ದಾಸ್ ವಿರುದ್ಧ ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸಿರುವ ಬಗ್ಗೆ 3 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಒಂದು ಪ್ರಕರಣದಲ್ಲಿ ಶಿಕ್ಷೆಯಾಗಿದ್ದು, ಉಳಿದ 2 ಪ್ರಕರಣಗಳು ತನಿಖೆಯಲ್ಲಿವೆ. ಈತನನ್ನು ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News