ಉಡುಪಿ : ಮಟ್ಕಾ ಪ್ರಕರಣಗಳ ಆರೋಪಿಗೆ ಗಡಿಪಾರು ಆದೇಶ
Update: 2026-07-18 20:03 IST
ಉಡುಪಿ, ಜು.18:: ಮಟ್ಕಾ ಪ್ರಕರಣಗಳ ಆರೋಪಿ ಉಡುಪಿ ಶಿವಳ್ಳಿ ಮೂಲದ ರಾಮರಾಜ್ ಅಲಿಯಾಸ್ ರಮೇಶ ಅರಸ್ (48) ಎಂಬಾತನ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಂ ಶಂಕರ್ ಗಡಿಪಾರು ಆದೇಶ ಹೊರಡಿಸಿದ್ದಾರೆ.
ಆರೋಪಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಮಟ್ಕಾ ಜುಗಾರಿ ನಡೆಸಿದ ಆರೋಪಕ್ಕೆ ಸಂಬಂಧಿಸಿ ದಂತೆ ಒಟ್ಟು 5 ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ 4 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು, ಉಳಿದ 1 ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.
ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ರಾಮರಾಜ್ ಅಲಿಯಾಸ್ ರಮೇಶ ಅರಸ್‌ನನ್ನು ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾ ಗಿದೆ ಎಂದು ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.