ಉಡುಪಿ | ಡಿ.23ರಂದು ವಿಚಾರಗೋಷ್ಠಿ-ಸಂವಾದ
Update: 2025-12-22 18:49 IST
ಸಾಂದರ್ಭಿಕ ಚಿತ್ರ
ಉಡುಪಿ, ಡಿ.22: ರಥಬೀದಿ ಗೆಳೆಯರು ಉಡುಪಿ, ಸಹಬಾಳ್ವೆ ಉಡುಪಿ, ಸೌಹಾರ್ದ ಕರ್ನಾಟಕ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ, ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಉಡುಪಿ ಇವರ ಸಂಯುಕ್ತ ಆಯೋಜನೆಯಲ್ಲಿ ಡಿ.23ರ ಮಂಗಳವಾರ ಸಂಜೆ 4:30ಕ್ಕೆ ಉಡುಪಿ ಅಜ್ಜರಕಾಡು ವಿಮಾ ನೌಕರರ ಸಭಾಭವನದಲ್ಲಿ ‘ನಮ್ಮ ವರ್ತಮಾನ -ಭವಿಷ್ಯದ ಆತಂಕಗಳು’ ಎಂಬ ವಿಷಯದ ಕುರಿತು ವಿಚಾರಗೋಷ್ಠಿ ಮತ್ತು ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ವಿಚಾರಗೋಷ್ಠಿಯಲ್ಲಿ ನಾಡಿನ ಖ್ಯಾತ ಜನಪರ ಚಿಂತಕ ಕೆ.ಪಿ.ಸುರೇಶ್ ಕಂಜರ್ಪಣೆ ವಿಚಾ ಮಂಡನೆ ಮಾಡಲಿದ್ದು, ಬಳಿಕ ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ಕಾರ್ಯಕ್ರಮದ ಸಂಯೋಜಕ ರಥಬೀದಿ ಗೆಳೆಯರು ಸಂಸ್ಥೆಯ ಸಂತೋಷ್ ನಾಯಕ್ ಪಟ್ಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.