ಡಿ.16-17ರಂದು ಉಡುಪಿಯ ನೀರು ಸರಬರಾಜಿನಲ್ಲಿ ವ್ಯತ್ಯಯ
Update: 2025-12-15 21:21 IST
ಉಡುಪಿ, ಡಿ.15: ಉಡುಪಿ ನಗರಸಭಾ ವ್ಯಾಪ್ತಿಯ ಉಪಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ. ವಿದ್ಯುತ್ ಗೆ ಸಂಬಂಧಿಸಿದ ಉಪಕರಣಗಳ ನಿರ್ವಹಣೆ ಕೆಲಸಕ್ಕಾಗಿ ಡಿ.16 ಮತ್ತು 17ರಂದು ವಿದ್ಯುತ್ ಪೂರೈಕೆ ಇಲ್ಲದಿರುವುದರಿಂದ, ಈ ದಿನಗಳಂದು ಉಡುಪಿ ನಗರಸಭಾ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಿಗೆ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.