ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ಉಡುಪಿ ಜಿಲ್ಲಾಧಿಕಾರಿ ಸೂಚನೆ
Update: 2023-08-03 19:39 IST
ಉಡುಪಿ, ಆ.3: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಉಡುಪಿ ನಗರಸಭಾ ವ್ಯಾಪ್ತಿಯ ಎಪಿಎಲ್, ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಫಲಾನುಭವಿಯಾದ ಮನೆಯ ಯಜಮಾನಿ ಇವರು ಉಡುಪಿ ನಗರಸಭಾ ಕಚೇರಿ, ಮಣಿಪಾಲ, ಹೆರ್ಗಾ, ಮಲ್ಪೆ ಮತ್ತು ಪುತ್ತೂರು ಉಪ ಕಚೇರಿಗಳಲ್ಲಿ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಮೊಬೈಲ್‌ನೊಂದಿಗೆ ತೆರಳಿ ಬೆಳಗ್ಗೆ 9ರಿಂದ ಸಂಜೆ 8ರವರೆಗೆ ನೊಂದಾವಣಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹಾಗೂ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.