ಗೃಹಲಕ್ಷ್ಮೀ ನೊಂದಣಿ ಕೇಂದ್ರಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ
Update: 2023-07-20 20:27 IST
ಉಡುಪಿ, ಜು.20: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಜಿಲ್ಲೆಯಲ್ಲಿ ಯೋಜನೆಯ ಅನುಷ್ಠಾನಕ್ಕಾಗಿ ತೆರೆದಿರುವ ಮಣಿಪಾಲದ ಹೆರ್ಗ ಸೇವಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನೋಂದಣಿಗೆ ಬರುವ ಫಲಾನುಭವಿಗಳಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ನೋಂದಣಿ ಪ್ರಕ್ರಿಯೆಯಲ್ಲಿ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಂಡು, ಯೋಜನೆ ಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವಂತೆ ಅವರು ಸೂಚನೆಗಳನ್ನು ನೀಡಿದರು.