×
Ad

ಸುಪ್ರೀಂ ತೀರ್ಪು: ಉಡುಪಿ ಜಿಲ್ಲಾ ಕಾಂಗ್ರೆಸ್ ಹರ್ಷ

Update: 2023-08-04 20:32 IST

ಉಡುಪಿ: ಮೋದಿ ಉಪನಾಮ ಪ್ರಕರಣದಲ್ಲಿ ರಾಹುಲ್ ಗಾಂಧಿ ದೋಷಿ ಎಂದು ಗುಜರಾತ್ ಹೈಕೋರ್ಟ್ ನೀಡಿದ ಎರಡು ವರ್ಷಗಳ ಜೈಲು ಶಿಕ್ಷೆಯ ತೀರ್ಪಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಸ್ವಾಗತಿಸಿದೆ.

ತೀರ್ಪಿನ ವಿರುದ್ಧ ದೇಶದ ಉಚ್ಛ ನ್ಯಾಯಾಲಯದ ಮೆಟ್ಟಲೇರಿದ್ದ ರಾಹುಲ್ ಗಾಂಧಿಗೆ ಕೊನೆಗೂ ಜಯ ಸಿಕ್ಕಂತಾಗಿದೆ. ಇದು ಸತ್ಯಕ್ಕೆ ಸಂಧ ಜಯ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News