ಉಡುಪಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಹಗ್ಗ ಜಗ್ಗಾಟ ಸ್ಪರ್ಧೆ
ಕುಂದಾಪುರ, ಜ.19: ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘ ಮರವಂತೆ ವತಿಯಿಂದ ಉಡುಪಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಪ್ರಥಮ ವರ್ಷದ ಹಗ್ಗ ಜಗ್ಗಾಟ ಸ್ಪರ್ಧೆ ‘ಬ್ರಹ್ಮಶ್ರೀ ನಾರಾಯಣ ಗುರು ಟ್ರೋಫಿ’ಯು ಶನಿವಾರ ಮರವಂತೆಯ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಎದುರು ನಡೆಯಿತು.
ಸ್ಪರ್ಧೆಯ ಮಹಿಳಾ ವಿಭಾಗದಲ್ಲಿ ಸ್ವಾಮಿ ಫ್ರೆಂಡ್ಸ್ ಪ್ರಥಮ, ಸಿದ್ಧಿ ವಿನಾಯಕ ಗೋಳಿಹೊಳೆ ತಂಡ ದ್ವಿತೀಯ, ವನದುರ್ಗಾ ಕೆರ್ಗಾಲು ತೃತೀಯ ಮತ್ತು ಪುರುಷರ ವಿಭಾಗಲ್ಲಿ ಪೊಲಿಪು ವೀರಾಂಜನೇಯ ತಂಡದ ಎ. ತಂಡ ಪ್ರಥಮ, ಸಿ ತಂಡ ದ್ವಿತೀಯ ಹಾಗೂ ಬಿ ತಂಡ ತೃತೀಯ ಬಹುಮಾನ ಗೆದ್ದುಕೊಂಡಿತು.
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ ಶುಭಕೋರಿದರು.
ಈ ಸಂದರ್ಭದಲ್ಲಿ ಉಡುಪಿ ಜಿಪಂ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ, ಉದ್ಯಮಿ ಗೋವಿಂದ ಬಾಬು ಪೂಜಾರಿ, ತಾಪಂ ಮಾಜಿ ಸದಸ್ಯ ಮಹೇಂದ್ರ ಪೂಜಾರಿ, ಗಂಗೊಳ್ಳಿ ಠಾಣಾಧಿಕಾರಿ ಪವನ್ ನಾಯಕ್, ಮರವಂತೆ -ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಕ್ಕಾಡಿ ಜಗದೀಶ್ ಪೂಜಾರಿ, ಬಿಜೆಪಿ ಬೈಂದೂರು ಮಂಡಲದ ಅಧ್ಯಕ್ಷೆ ಅನಿತಾ ಆರ್.ಕೆ., ಪ್ರಮುಖರಾದ ಪುಟ್ಟಯ್ಯ ಬಿಲ್ಲವ, ಸಂಜೀವ ಪೂಜಾರಿ, ಶಂಕರ ಪೂಜಾರಿ, ಮರವಂತೆ ಗ್ರಾಪಂ ಅಧ್ಯಕ್ಷ ನಾಗರಾಜ್ ಪಟಗಾರ್, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಮಾಜ ಸೇವಾ ಸಂಘ ಮರ ವಂತೆಯ ಅಧ್ಯಕ್ಷ ಗಣೇಶ್ ಪೂಜಾರಿ, ಉಪಾಧ್ಯಕ್ಷ ಚಂದ್ರ ಬಿಲ್ಲವ ಮೊದಲಾದವರು ಉಪಸ್ಥಿತರಿದ್ದರು.
ಸಂಘದ ಕಾರ್ಯದರ್ಶಿ ಶ್ಯಾಮಲಾ ಬಿಲ್ಲವ ಸ್ವಾಗತಿಸಿದರು. ಕೋಶಾಧಿಕಾರಿ ಸೋಮಯ್ಯ ಬಿಲ್ಲವ ವಂದಿಸಿದರು. ಕಿರಣ್ ಪೂಜಾರಿ, ಯಶೋದಾ, ಕಿಶೋರ್ ಕಾರ್ಯಕ್ರಮ ನಿರೂಪಿಸಿದರು