×
Ad

ಉಡುಪಿ ಜಿಲ್ಲಾಮಟ್ಟದ ಶಟಲ್ ಬ್ಯಾಡ್ಮಿಂಟನ್- ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ

Update: 2023-10-28 19:09 IST

ಕುಂದಾಪುರ: ದಕ್ಷಿಣ ಕನ್ನಡ ಉಡುಪಿ ಜಿಲ್ಲಾ ಸೌತ್ ಕೆನರಾ ಪೋಟೋಗ್ರಾಫರ್ಸ್‌ ಅಸೋಸಿಯೇಶನ್ ಕುಂದಾಪುರ-ಬೈಂದೂರು ವಲಯದ ಆಶ್ರಯದಲ್ಲಿ ಸಂಘದ ಸದಸ್ಯರಿಗಾಗಿ ಉಡುಪಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಮತ್ತು ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ‘ದಿ. ರಾಬರ್ಟ್ ಡಿಸೋಜ ಟ್ರೋಫಿ’ಯನ್ನು ಅಂಕದಕಟ್ಟೆಯ ಸಹನಾ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಶನಿವಾರ ಏರ್ಪಡಿಸಲಾಗಿತ್ತು.

ಪಂದ್ಯಾಟವನ್ನು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು. ಎಸ್.ಕೆ.ಪಿ.ಎ ಕುಂದಾಪುರ- ಬೈಂದೂರು ವಲಯ ಅಧ್ಯಕ್ಷ ದಿವಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ 17 ವರ್ಷದ ವಯೋಮಿತಿಯ ಸ್ಕೂಲ್ ಕ್ರಿಕೆಟ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಕುಮಾರಿ ರಚಿತಾ ಹತ್ವಾರ್ ಅವರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಎಸ್‌ಕೆಪಿಎ ದ.ಕ- ಉಡುಪಿ ಅಧ್ಯಕ್ಷ ಪದ್ಮಪ್ರಸಾದ್ ಜೈನ್, ಸಹನಾ ಗ್ರೂಪ್ಸ್‌ನ ಸುರೇಂದ್ರ ಶೆಟ್ಟಿ, ಟೋರ್ಪಡೋಸ್ ಸಂಸ್ಥೆಯ ಮುಖ್ಯಸ್ಥ ಗೌತಮ್ ಶೆಟ್ಟಿ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗ ರಾಜ ರಾಯಪ್ಪನಮಠ, ಛಾಯಾಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷ ಗಿರೀಶ್ ಜಿ.ಕೆ., ಎಸ್‌ಕೆಪಿಎ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾ ನಂದ ಬಂಟ್ವಾಳ, ಡೆಲ್ಫಿನ್ ಡಿಸೋಜ, ದ.ಕ-ಉಡುಪಿ ಎಸ್.ಕೆ.ಪಿ.ಎ ಸಹಕಾರಿ ಸಂಘದ ಅಧ್ಯಕ್ಷ ವಾಸುದೇವ ರಾವ್, ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷ ಆನಂದ ಎನ್.ಬಂಟ್ವಾಳ, ಜಿಲ್ಲಾ ಕೋಶಾಧಿಕಾರಿ ನವೀನ್ ರೈ, ಜಿಲ್ಲಾ ಕ್ರೀಡಾ ಕಾರ್ಯದರ್ಶಿಗಳಾದ ರಂಜಿತ್, ಭಾರದ್ವಾಜ್, ಕಾರ್ಯದರ್ಶಿ ದಿನೇಶ್ ರಾಯಪ್ಪನಮಠ ಮೊದಲಾದವರು ಉಪಸ್ಥಿತರಿದ್ದರು.

ಎಸ್.ಕೆ.ಪಿ.ಎ ಕುಂದಾಪುರ ವಲಯದ ಅಧ್ಯಕ್ಷ ದಿವಾಕರ ಶೆಟ್ಟಿ ಪ್ರಸ್ತಾವಿಕ ವಾಗಿ ಮಾತನಾಡಿ ಸ್ವಾಗತಿಸಿದರು. ಅಮೃತ್ ಬೀಜಾಡಿ ಸನ್ಮಾನ ಪತ್ರ ವಾಚಿಸಿದರು. ಚಂದ್ರಕಾಂತ್ ವಂದಿಸಿದರು. ಶ್ರದ್ದಾ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News