ಉಡುಪಿ | ಡಾ.ಕಾತ್ಯಾಯಿನಿಗೆ ಸಾಹಿತ್ಯ ಅಕಾಡೆಮಿ ಪುಸ್ತಕ ಪ್ರಶಸ್ತಿ ಪ್ರದಾನ
Update: 2025-12-06 18:04 IST
ಉಡುಪಿ, ಡಿ.6: ತುಮಕೂರಿನ ಗುಬ್ಬಿಯಲ್ಲಿ ಡಿ.5ರಂದು ನಡೆದ ಸಮಾರಂಭದಲ್ಲಿ ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರ ವಿಮರ್ಶಾ ಕೃತಿ ಇರವಿನ ಅರಿವಿಗೆ ಸಾಹಿತ್ಯ ಅಕಾಡೆಮಿ ಪುಸ್ತಕ ಪ್ರಶಸ್ತಿ -2023ನ್ನು ಪ್ರದಾನ ಮಾಡಲಾಯಿತು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ಪ್ರಶಸ್ತಿ ಪ್ರದಾನ ಮಾಡಿದರು. ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ.ಗಾಯತ್ರಿ, ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ, ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಮೊದಲಾದವರು ಉಪಸ್ಥಿತರಿದ್ದರು.