ಉಡುಪಿ | ಗ್ರಾಪಂ ಅಧ್ಯಕ್ಷರ ಆಯ್ಕೆಗೆ ಚುನಾವಣಾಧಿಕಾರಿಗಳ ನೇಮಕ
Update: 2025-05-29 23:06 IST
ಉಡುಪಿ : ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮ ಪಂಚಾಯತಿಯ ಮುಂದಿನ ಅವಧಿಗೆ ಅಧ್ಯಕ್ಷರ ಸ್ಥಾನಕ್ಕೆ (ಮೀಸಲಾತಿ: ಅನುಸೂಚಿತ ಜಾತಿ-ಮಹಿಳೆ) ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಕಾರ್ಕಳದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಶ್ರೀನಿವಾಸ ಅವರನ್ನು ಗೊತ್ತುಪಡಿಸಿದ ಅಧಿಕಾರಿಯನ್ನಾಗಿ ನೇಮಿಸಲಾಗಿದ್ದು, ಇವರು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 45 ಹಾಗೂ (ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆ) ನಿಯಮಗಳು 1995ರ ನಿಯಮ 4ರಿಂದ 11ರವರೆಗಿನ ನಿಯಮದಂತೆ ಚುನಾವಣೆ ನಡೆಸಿ, ಅಧ್ಯಕ್ಷ ಸ್ಥಾನವನ್ನು ಆಯ್ಕೆ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.