×
Ad

ಉಡುಪಿ | ಸಾಲ ಯೋಜನೆಯ ದಿನಾಂಕ ವಿಸ್ತರಣೆ

Update: 2025-11-27 10:27 IST

ಸಾಂದರ್ಭಿಕ ಚಿತ್ರ PC  GROK

ಉಡುಪಿ, ನ.26: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮವು ಅನುಷ್ಠಾನಗೊಳಿಸುತ್ತಿರುವ ವಿವಿಧ ಸಾಲ ಮತ್ತು ಸಹಾಯಧನ ಯೋಜನೆಗಳಿಗೆ ಆನ್ಲೈನ್ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಈಗಾಗಲೇ ರಾಜ್ಯದಲ್ಲಿ 3,434 ಅರ್ಜಿಗಳು ಸಲ್ಲಿಕೆಯಾಗಿದ್ದು, ದಕ್ಷಿಣ ಕನ್ನಡದಿಂದ 429 ಮತ್ತು ಉಡುಪಿ ಜಿಲ್ಲೆಯಿಂದ 150 ಅರ್ಜಿಗಳು ಬಂದಿವೆ.

ಕ್ರಿಶ್ಚಿಯನ್ ಸಮುದಾಯದ ಹೆಚ್ಚಿನ ಅರ್ಹ ಫಲಾನುಭವಿಗಳು ಲಾಭ ಪಡೆಯಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಆನ್ಲೈನ್ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕವನ್ನು ನ.30ರಿಂದ ಡಿ.15ರವರೆಗೆ ವಿಸ್ತರಿಸಲಾಗಿದ್ದು, ಸಮುದಾಯದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯ ಪ್ರಯೋಜನವನ್ನು ಪಡೆಯುವಂತೆ ಎಂದು ನಿಗಮದ ನಿರ್ದೇಶಕ ಪ್ರಶಾಂತ್ ಜತ್ತನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News