×
Ad

ಉಡುಪಿ | ವಿಷದ ಹಾವು ಕಡಿತ: ಕೃಷಿಕ ಮೃತ್ಯು

Update: 2024-12-17 13:04 IST

ಉಡುಪಿ, ಡಿ.17: ವಿಷದ ಹಾವು ಕಡಿತಕ್ಕೆ ಒಳಗಾಗಿದ್ದ ಕೃಷಿಕರೊಬ್ಬರು ಮೃತಪಟ್ಟ ಘಟನೆ ಉಡುಪಿ ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ಎಂಬಲ್ಲಿ ನಡೆದಿದೆ.

ಮೃತರನ್ನು ಗುಜ್ಜರಬೆಟ್ಟು ನಿವಾಸಿ ದಿ.ಬೂಧ ಪೂಜಾರಿ ಎಂಬವರ ಪುತ್ರ, ಕೃಷಿಕ ಸುಂದರ ಪೂಜಾರಿ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ತೋಟದಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದ ವೇಳೆ ಇವರಿಗೆ ವಿಷದ ಹಾವು ಕಚ್ಚಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಅಸ್ವಸ್ಥಗೊಂಡ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸೋಮವಾರ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಇವರು ಕೃಷಿ ಕಾರ್ಯಗಳಲ್ಲಿ ಮತ್ತು ಕೃಷಿ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News