×
Ad

ಉಡುಪಿ: ಜಾನಪದ -ಯಕ್ಷಗಾನ ಸಂಭ್ರಮ ಕಾರ್ಯಕ್ರಮ

Update: 2025-12-21 19:00 IST

ಉಡುಪಿ, ಡಿ.21: ಲಯನ್ಸ್ ಅಂತಾರಾಷ್ಟ್ರೀಯ ಜಿಲ್ಲೆ 317ಸಿ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಉಡುಪಿ, ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಘಟಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ, ಲಯನ್ಸ್ ಕ್ಲಬ್ ಮಲ್ಪೆ ಹಾಗೂ ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ’ಜಾನಪದ ಮತ್ತು ಯಕ್ಷಗಾನ ಸಂಭ್ರಮ -2025’ ಕಾರ್ಯಕ್ರಮವನ್ನು ಶನಿವಾರ ಅಜ್ಜರಕಾಡು ಪುರಭವನದಲ್ಲಿ ಆಯೋಜಿಸ ಲಾಗಿತ್ತು.

ಕಾರ್ಯಕ್ರಮವನ್ನು ಲಯನ್ಸ್ ಅಂತರಾಷ್ಟ್ರೀಯ ಜಿಲ್ಲೆ 317ಸಿ ಇದರ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಲಯನ್ಸ್ ಜಿಲ್ಲೆಯ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಯೋಜಕಿ ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ ವಹಿಸಿದ್ದರು.

ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ದ್ವಿತೀಯ ಉಪ ಜಿಲ್ಲಾ ಗವರ್ನರ್ ಹರಿಪ್ರಸಾದ್ ರೈ, ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸುನೀಲ್ ಕುಮಾರ್ ಶೆಟ್ಟಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರಿಗೆ ’ತಲ್ಲೂರ್ಸ್ ಸಂಸ್ಕೃತಿ ಸಂವರ್ಧಿನಿ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಂಟ್ವಾಳದ ಜಾನಪದ ಕಲಾವಿದ ಲೋಕಯ್ಯ ಶೇರಾ ಅವರನ್ನು ಗೌರವಿಸಲಾಯಿತು. ಲಯನ್ಸ್ ಮಾಜಿ ಗವರ್ನರ್‌ಗಳಾದ ಡಾ.ರವೀಂದ್ರನಾಥ ಶೆಟ್ಟಿ, ಶ್ರೀಧರ ಶೇಣವ, ಲಯನ್ಸ್ ಜಿಲ್ಲಾ ಸಂಪುಟ ಕಾರ್ಯದರ್ಶಿ ಶಶಿಧರ ಶೆಟ್ಟಿ, ಮಲ್ಪೆ ಲಯನ್ಸ್ ಕ್ಲಬ್ ಅಧ್ಯಕ್ಷ ರವೀಂದ್ರ ಕರ್ಕೇರ ಉಪಸ್ಥಿತರಿದ್ದರು.

ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಘಟಕದ ಪ್ರಧಾನ ಕಾರ್ಯದರ್ಶಿ ರವಿರಾಜ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಲಯನ್ಸ್ ಸಂಪುಟ ಕಾರ್ಯದರ್ಶಿ ಶಾಲಿನಿ ಡಿ.ಬಂಗೇರ ವಂದಿಸಿದರು. ಆರಂಭದಲ್ಲಿ ಯಕ್ಷಗಾನ ಕೇಂದ್ರ ಇಂದ್ರಾಳಿ ಇದರ ಕಲಾವಿದರಿಂದ ’ದಕ್ಷ ಯಜ್ಞ’ ಎಂಬ ಯಕ್ಷಗಾನ ಪ್ರದರ್ಶನಗೊಂಡಿತು. ಉಡುಪಿಯ ಕಲಾಮಯಂ ತಂಡ ಸ್ಥಳೀಯ ಹಾಗೂ ರಾಜ್ಯದ ಇತರ ಭಾಗಗಳ ಜಾನಪದ ಪ್ರಕಾರಗಳು ಸಭಿಕರ ಮನಸೂರೆಗೊಂಡವು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News