ಉಡುಪಿ | ಉಪ್ಪಿನಕೋಟೆ ಮಸೀದಿಯ ಮಾಜಿ ಅಧ್ಯಕ್ಷ ಮೊಹಮ್ಮದ್ ಜಮಾಲ್ ಹೈದರ್ ನಿಧನ
ಉಡುಪಿ: ಉಪ್ಪಿನಕೋಟೆಯ ಜಾಮಿಯಾ ಮಸೀದಿಯ ಮಾಜಿ ಅಧ್ಯಕ್ಷ ಮೊಹಮ್ಮದ್ ಜಮಾಲ್ ಹೈದರ್ (68) ಅವರು ಬುಧವಾರ ರಾತ್ರಿ ನಿಧನರಾಗಿದ್ದಾರೆ.
ಯುನಿಟಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿದ್ದ ಅವರು, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದರು.
ಬಡವರ ಪರ ಕಾಳಜಿ ಹೊಂದಿದ್ದ ಅವರು, ಸಮಾಜದ ದುರ್ಬಲ ವರ್ಗದ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಾ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಜಾಮಿಯ ಮಸೀದಿ ಬ್ರಹ್ಮಾವರದ ಕಾರ್ಯದರ್ಶಿ/ಅಧ್ಯಕ್ಷರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು. ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಸದಸ್ಯರಾಗಿಯೂ, ಯುನಿಟಿ ಸೌಹಾರ್ದ ಬ್ಯಾಂಕ್ ಉಡುಪಿಯ ಹಾಲಿ ಅಧ್ಯಕ್ಷರಾಗಿದ್ದರು. ಜಮೀಯತುಲ್ ಫಲಾಹ್ ಹಾಗೂ ಇನ್ನಿತರ ಸಾಮುದಾಯಿಕ, ಧಾರ್ಮಿಕ ಹಾಗೂ ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.
ಜಮಾಲ್ ಹೈದರ್ ಅವರು ಪತ್ನಿ ಹಾಗೂ ಮೂವರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಅವರು ವಾರ್ತಾಭಾರತಿಯ ಓದುಗರೂ, ಹಿತೈಷಿಯೂ ಆಗಿದ್ದರು.
ಸಮಾಜಮುಖಿ ಚಿಂತನೆ, ಸರಳ ವ್ಯಕ್ತಿತ್ವ ಹಾಗೂ ಸೇವಾ ಮನೋಭಾವದ ಮೂಲಕ ಗುರುತಿಸಿಕೊಂಡಿದ್ದ ಅವರ ನಿಧನಕ್ಕೆ ಹಲವು ಗಣ್ಯರು, ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಹಿತೈಷಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.