×
Ad

ಉಡುಪಿ: ಉದ್ಯೋಗ ಕೊಡಿಸುವುದಾಗಿ ನಂಬಿಸಿ 7 ಲಕ್ಷ ರೂ. ವಂಚನೆ

Update: 2024-01-29 20:36 IST

ಉಡುಪಿ, ಜ.29: ಸಾಮಾಜಿಕ ಜಾಲತಾಣದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜ.25ರಂದು ರಾಧಿಕಾ ರಾಧಾಕೃಷ್ಣನ್ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲ ತಾಣದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಾಟ್ಸಾಪ್ ಸಂದೇಶ ಬಂದಿದ್ದು, ಇದನ್ನು ನಂಬಿದ ವ್ಯಕ್ತಿ 7 ಲಕ್ಷ ರೂ. ಹಣವನ್ನು ಪಾವತಿಸಿದ್ದಾರೆ. ಆದರೆ ಅಪರಿಚಿತ ವ್ಯಕ್ತಿಯು ನಂಬಿಕೆ ದ್ರೋಹ ಹಾಗೂ ಮೋಸ ಮಾಡಿರುವುದಾಗಿ ದೂರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News