×
Ad

ಉಡುಪಿ | ಬಡ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Update: 2025-11-18 22:21 IST

ಉಡುಪಿ, ನ.18: ಉಡುಪಿ ಮುಸ್ಲಿಮ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಝಕಾತ್ ನಿಧಿಯಿಂದ 10 ಬಡ ಫಲಾನುಭವಿ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಮಂಗಳವಾರ ಉಡುಪಿ ಜಾಮಿಯಾ ಮಸೀದಿ ಸಭಾಂಗಣದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಮುನೀರ್ ಮುಹಮ್ಮದ್ ವಹಿಸಿದ್ದರು. ಅಥಿತಿಗಳಾಗಿ ಉಡುಪಿ ಜಾಮೀಯ ಮಸೀದಿ ಅಧ್ಯಕ್ಷ ರಿಯಾಝ್‌ ಅಹ್ಮದ್, ಮಾಜಿ ಅಧ್ಯಕ್ಷ ಕಲ್ಯಾಣಪುರ ಅಬ್ದುಲ್ ಗಫೂರ್ ಉಪಸ್ಥಿತರಿದ್ದರು.

ಮಸೀದಿಯ ಮೌಲಾನ ಅಬ್ದುಲ್ ರಶೀದ್ ನದ್ವಿ ಝಕಾತ್ ಮಹತ್ವ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಫಲಾನುಭನಿಗಳಿಗೆ ಹೊಲಿಗೆ ಯಂತ್ರವನ್ನು ವಿತರಿಸಲಾಯಿತು. ಕಾರ್ಯದರ್ಶಿ ವಿ.ಎಸ್.ಉಮರ್ ಸ್ವಾಗತಿದರು. ರಿಯಾಝ್‌ ಕುಕ್ಕಿಕಟ್ಟೆ ವಂದಿಸಿದರು. ಎಂ.ಇಕ್ಬಾಲ್ ಮನ್ನಾ ಕಾರ್ಯಕ್ರಮ ನಿರೋಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News