×
Ad

ಉಡುಪಿ: 7 ಗ್ರಾಪಂಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ

Update: 2023-10-02 19:27 IST

ಉಡುಪಿ, ಅ.2: ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ ವೇಟ್ ಹಾಲ್‌ನಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಜಿಲ್ಲೆಯ ಕೋಡಿ, ಕಾಲ್ತೋಡು, ಮಡಾಮಕ್ಕಿ, ಬೆಳ್ಳೆ, ನೀರೆ ಹಾಗೂ ಅಲೆವೂರು ಗ್ರಾಮ ಪಂಚಾಯತ್‌ಗಳಿಗೆ 2022-23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರವನ್ನು ಪ್ರದಾನ ಮಾಡ ಲಾಯಿತು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ ಖರ್ಗೆ ಅವರಿಂದ ಗ್ರಾಪಂ ಪರವಾಗಿ ಗ್ರಾಪಂ ಅಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಪುರಸ್ಕಾರವನ್ನು ಸ್ವೀಕರಿಸಿದರು. ಪುರಸ್ಕಾರವು ಚರಕದ ಸ್ಮರಣಿಕೆ, ಪ್ರಶಸ್ತಿ ಪತ್ರ ಹಾಗೂ ಗ್ರಾಪಂ ಕಾಮಗಾರಿಗೆ 5 ಲಕ್ಷ ರೂ. ಬಹುಮಾನವನ್ನು ಒಳಗೊಂಡಿದೆ.

ಇದೇ ಸಂದರ್ಭದಲ್ಲಿ ಜಿಲ್ಲೆಯ ಹೊಸಾಡು ಮತ್ತು 80 ಬಡಗಬೆಟ್ಟು ಗ್ರಾಪಂಗಳಿಗೆ ವಿಶೇಷ ಗಾಂಧಿ ಪುರಸ್ಕಾರವನ್ನು ನೀಡಲಾ ಯಿತು. ಕರ್ನಾಟಕ ಪಂಚಾಯತ್‌ರಾಜ್ ಆಯುಕ್ತಾಲಯದ ಆಯುಕ್ತೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಅಪರ ಮುಖ್ಯ ಕಾರ್ಯ ದರ್ಶಿ ಉಮಾಮದೇವನ್ ಮೊದಲಾದ ವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News