×
Ad

ಉಡುಪಿ ಗ್ಯಾಂಗ್‌ವಾರ್ ಪ್ರಕರಣ: ಮತ್ತೆ ಮೂವರು ಆರೋಪಿಗಳ ಬಂಧನ

Update: 2024-05-26 11:42 IST

ಉಡುಪಿ, ಮೇ 26: ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಕುಂಜಿಬೆಟ್ಟು ಎಂಬಲ್ಲಿ ಮೇ 19ರಂದು ನಸುಕಿನ ವೇಳೆ ನಡು ರಸ್ತೆಯಲ್ಲಿಯೇ ಗರುಡ ಗ್ಯಾಂಗ್ ಮಧ್ಯೆ ನಡೆದ ಗ್ಯಾಂಗ್‌ವಾರ್‌ಗೆ ಸಂಬಂಧಿಸಿ ಮತ್ತೆ ಮೂವರು ಆರೋಪಿಗಳನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಆರಕ್ಕೇರಿದೆ.

ಬಂಧಿತರನ್ನು ಗರುಡ ಗ್ಯಾಂಗ್ ನ ಮಜೀದ್, ಅಲ್ಫಾಝ್, ಶರೀಫ್ ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಮೇ 20ರಂದು ಪ್ರಮುಖ ಆರೋಪಿ ಕಾಪು ಕೊಂಬಗುಡ್ಡೆ ಮೂಲದ ಆಶಿಕ್(26), ತೋನ್ಸೆ ಹೂಡೆಯ ರಾಕೀಬ್(21) ಹಾಗೂ ಮೇ 25ರಂದು ಸಕ್ಲೈನ್(26) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಕಾರ್ಯಾಚರಣೆ ತೀವ್ರಗೊಳಿಸಿದ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ ಎಂದು ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತ ಮೂವರಲ್ಲಿ ವಿಡಿಯೋದಲ್ಲಿ ಕಾಣುವ ಕಾರು ಢಿಕ್ಕಿ ಹೊಡೆದು ಗಾಯಗೊಂಡ ಶರೀಫ್ ಎಂಬಾತ ಕೂಡ ಇದ್ದಾನೆ. ಈತನಿಗೆ ಗಾಯಗಳಾಗಿದ್ದು, ಈಗಾಗಲೇ ಚಿಕಿತ್ಸೆ ಪಡೆದುಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News