×
Ad

ಉಡುಪಿ | ಡಿ.11ರಂದು ಸರಕಾರಿ ಶಾಲೆಗಳ ಶೌಚಾಲಯದ ಸ್ವಚ್ಛತಾ ಸೇವೆ ಅಭಿಯಾನ ಉದ್ಘಾಟನೆ

Update: 2025-12-09 21:28 IST

ಸಾಂದರ್ಭಿಕ ಚಿತ್ರ PC | GROK

ಉಡುಪಿ, ಡಿ.9: ಸರಕಾರಿ ಶಾಲೆಗಳ ಶೌಚಾಲಯದ ಸ್ವಚ್ಛತಾ ಸೇವೆ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಡಿ.11 ಗುರುವಾರ ಅಪರಾಹ್ನ 3:30ಕ್ಕೆ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದ ಗೋಪಾಡಿ ರುಕ್ಮಿಣಿ ಶ್ರೀನಿವಾಸ ರಂಗಮಂದಿರದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಭೀಮನಕಟ್ಟೆ ಭೀಮಸೇತು ಮುನಿವೃಂದ ಮಠದ ಶ್ರೀ ರಘುವರೇಂದ್ರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದು ಆಶೀರ್ವಚಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಆಡಳಿತ) ಉಪನಿರ್ದೇಶಕ ಲೋಕೇಶ್ ಸಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಅಭಿವೃದ್ಧಿ) ಉಪನಿರ್ದೇಶಕ ಅಶೋಕ್ ಕಾಮತ್, ಸಮಾಜ ಸೇವಕ ಎಂ. ದಿನೇಶ್ ಹೆಗ್ಡೆ, ಉಪನ್ಯಾಸಕ ಹೆಚ್.ಬಿ ಮಂಜುನಾಥ್, ಮಣೂರು ಪಡುಕೆರೆ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ ಕುಂದರ್, ಗೋಪಾಡಿ ಶ್ರೀನಿವಾಸ ರುಕ್ಮಿಣಿ ಪ್ರತಿಷ್ಠಾನ ಸಂಸ್ಥಾಪಕ ಗೋಪಾಡಿ ಶ್ರೀನಿವಾಸ ರಾವ್ ಹಾಗೂ ಇತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News