×
Ad

ಉಡುಪಿ: ‘ಕೈಮಗ್ಗ ಸೀರೆಗಳ ಉತ್ಸವ’ ಕಾರ್ಯಕ್ರಮಕ್ಕೆ ಚಾಲನೆ

Update: 2023-08-05 20:30 IST

ಉಡುಪಿ: ಉಡುಪಿ ಪದ್ಮಶಾಲಿ ನೇಕಾರ ಪ್ರತಿಷ್ಠಾನ ಆಶ್ರಯದಲ್ಲಿ ಮತ್ತು ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟ ಹಾಗೂ ಉಡುಪಿ, ತಾಳಿಪಾಡಿ, ಶಿವಳ್ಳಿ, ಬ್ರಹ್ಮಾವರ, ಪಡುಪಣಂಬೂರು, ಮಂಗಳೂರು, ಬಸ್ರೂರು ಮತ್ತು ಮಿಜಾರು ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘಗಳ ಜಂಟಿ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚ ರಣೆಯ ಅಂಗವಾಗಿ ಉಡುಪಿಯ ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾದ ‘ಕೈಮಗ್ಗ ಸೀರೆಗಳ ಉತ್ಸವ’ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ನೇಕಾರರು ಶ್ರಮಜೀವಿಗಳು. ಪದ್ಮಶಾಲೆ ಸಮುದಾಯ ದೇಶದ ಪ್ರಗತಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದೆ. ಆದರೆ ಅವರಿಗೆ ಪ್ರೋತ್ಸಾಹಿಸುವ ಕೆಲಸ ಆಗುತ್ತಿಲ್ಲ. ಆದುದರಿಂದ ಈ ಸಮುದಾಯ ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಬೆಳೆದು ದೇಶದ ಅಭಿವೃದ್ಧಿಗೆ ಪ್ರಾಮಾಣಿಕ ಕೊಡುಗೆ ನೀಡಬೇಕು ಎಂದರು.

ಅಧ್ಯಕ್ಷತೆಯನ್ನು ಪ್ರತಿಷ್ಠಾನದ ಅಧ್ಯಕ್ಷ ರತ್ನಾಕರ ಇಂದ್ರಾಳಿ ವಹಿಸಿದ್ದರು. ಉದ್ಯಮಿ ಪ್ರಸಾದ್‌ರಾಜ್ ಕಾಂಚನ್, ಆಯೋ ಜನಾ ಸಮಿತಿಯ ಗೌರವಾಧ್ಯಕ್ಷ ಡಾ.ಜಗದೀಶ್ ಶೆಟ್ಟಿಗಾರ್ ಆತ್ರಾಡಿ, ನಗರಸಭೆ ಸದಸ್ಯ ರಜನಿ ಹೆಬ್ಬಾರ್, ದ.ಕ. ಜಿಲ್ಲಾ ಪದ್ಮಶಾಲಿ ಮಹಾಸಭಾದ ನೇಕಾರ ವೇದಿಕೆಯ ಸಂಚಾಲಕ ಡಾ.ಶಿವ ಪ್ರಸಾದ್ ಕಾರ್ಕಳ, ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಸುಕನ್ಯಾ ಮೇರಿ ಮುಖ್ಯ ಅತಿಥಿಗಳಾಗಿದ್ದರು.

ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಶಿವ ಶಂಕರ್, ಕರ್ನಾಟಕ ರಾಜ್ಯ ನೇಕಾರ ಸಮುದಾಯ ಗಳ ಒಕ್ಕೂಟದ ಕಾರ್ಯಾ ಧ್ಯಕ್ಷ ರಘು ಶ್ರೀನಿವಾಸ ಶೆಟ್ಟಿಗಾರ್, ಪ್ರಮುಖರಾದ ಜಯರಾಮ್ ಶೆಟ್ಟಿಗಾರ್, ಸತೀಶ್ ಶೆಟ್ಟಿಗಾರ್ ಆತ್ರಾಡಿ ಮೊದಲಾದವರು ಉಪಸ್ಥಿತರಿದ್ದರು.

ಆಯೋಜನಾ ಸಮಿತಿಯ ಅಧ್ಯಕ್ಷ ಮಂಜುನಾಥ ಮಣಿಪಾಲ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಾಶಿವ ಶೆಟ್ಟಿಗಾರ್ ಗೋಳಿಚೋರ ಕಾರ್ಯಕ್ರಮ ನಿರೂಪಿಸಿದರು. ಬಳಿಕ ‘ಕೈಮಗ್ಗದ ನೇಯ್ಗೆ ಅಂದು-ಇಂದು- ಮುಂದು’ ವಿಚಾರಸಂಕಿರಣ ನಡೆಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News