ಉಡುಪಿ: ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳಿಗೆ ಆರೋಗ್ಯಾಧಿಕಾರಿಗಳ ದಿಢೀ‌ರ್ ದಾಳಿ; ರಾಸಾಯನಿಕ ಬಳಸುತ್ತಿದ್ದವರ ವಿರುದ್ಧ ಪ್ರಕರಣ ದಾಖಲು

Update: 2026-08-20 12:52 IST

ಉಡುಪಿ, ಆ.20: ಉಡುಪಿ ಸಮೀಪದ ಅಲೆವೂರು ಗ್ರಾಮದ 3-4 ಬಾಳೆ ಹಣ್ಣು ದಾಸ್ತಾನು ಕೇಂದ್ರಗಳಿಗೆ ಇಂದು ಏಕಕಾಲದಲ್ಲಿ ಧಿಡೀರ್ ದಾಳಿ ನಡೆಸಿದ ಕುಂದಾಪುರ ಅಸಿಸ್ಟೆಂಟ್ ಕಮಿಷನರ್ ರಶ್ಮಿ ಎಸ್ ಆರ್ ಹಾಗೂ ಆರೋಗ್ಯಾಧಿಕಾರಿಗಳು ಬಾಳೆ ಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಸುತ್ತಿದ್ದ ಹಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಗುರುವಾರ ಮಂಜಾನೆ ಕೆಸ್ತೂರು ಹಾಗೂ ಮಣಿಪಾಲ ಸಮೀಪದ ದುಗ್ಗಿ ಪರಿಸರದಲ್ಲಿ ಬಾಳೆ ಹಣ್ಣು ರಖಂ ವ್ಯಾಪಾರಸ್ಥರು ಹಾಗೂ ದಾಸ್ತಾನುದಾರರ ಗೋದಾಮುಗಳಿಗೆ ದಾಳಿ ನಡೆಸಿದ ಅಧಿಕಾರಿಗಳು, ಬಾಳೆ ಹಣ್ಣಿಗೆ ಬಳಸುತ್ತಿದ್ದ, ಆರೋಗ್ಯಕ್ಕೆ ಹಾನಿಕಾರಕ ರಾಸಾಯನಿಕಗಳು, ಕೃತಕ ಬಣ್ಣ ನೀಡುವ ರಾಸಾಯನಿಕಗಳು, ಅದನ್ನು ಬಳಸಲು ಉಪಯೋಗಿಸುವ ಪರಿಕರಗಳನ್ನು ವಶಪಡಿಸಿಕೊಂಡು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೃತ್ಯಕ್ಕೆ ಬಳಸುತ್ತಿದ್ದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News