×
Ad

ಉಡುಪಿ | ಮಾನವ ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖ: ನ್ಯಾ.ಕಿರಣ್ ಗಂಗಣ್ಣವರ್

Update: 2025-12-10 18:06 IST

ಉಡುಪಿ, ಡಿ.10: ಮಾನವ ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖವಿದ್ದಂತೆ. ಹಕ್ಕು ಮತ್ತು ಕರ್ತವ್ಯಗಳನ್ನು ಸಮಾನವಾಗಿ ನೋಡುವ ಮನೋಭಾವವನ್ನು ಎಲ್ಲರೂ ಹೊಂದಿದರೆ ಮಾತ್ರ ನಮ್ಮ ನಾಗರಿಕ ಸಮಾಜದಲ್ಲಿ ಮಾನವೀಯ ಮೌಲ್ಯಗಳು ಉಳಿಯಲು ಸಾಧ್ಯ ಎಂದು ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್ ಗಂಗಣ್ಣವರ್ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಡಾ.ಜಿ ಶಂರ್ಕ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ರಾಷ್ಟ್ರೀಯ ಸೇವಾ ಯೋಜನೆ ಉಡುಪಿ ವಿಭಾಗ, ಕಾಲೇಜಿನ ಮಾನವ ಹಕ್ಕುಗಳ ಸಂಘ ಮತ್ತು ಐಕ್ಯೂಎಸಿ ಇವರ ಸಹಭಾಗಿತ್ವದೊಂದಿಗೆ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳ ಲಾದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಮಾನವ ಹಕ್ಕು ಪ್ರಮಾಣ ವಚನವನ್ನು ಬೋಧಿಸಿ ಅವರು ಮಾತನಾಡುತ್ತಿದ್ದರು.

ಮುಖ್ಯ ಅತಿಥಿಯಾಗಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಸದಸ್ಯ ಕಾರ್ಯದರ್ಶಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಮನು ಪಟೀಲ್ ಬಿ.ವೈ.ಮಾತನಾಡಿ, ಮಾನವ ಹಕ್ಕುಗಳು ಇಂದು ನಮ್ಮ ದೈನಂದಿನ ಅಗತ್ಯತೆಗಳಾಗಿವೆ. ನಾವು ನಮ್ಮ ಹಕ್ಕುಗಳ ಜೊತೆಗೆ ಇತರರ ಹಕ್ಕುಗಳನ್ನು ಅರಿತು ಗೌರವಿಸಿ ಬದುಕುವುದನ್ನು ಕಲಿಯಬೇಕು ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಲ್ ಮಾತನಾಡಿ, ಮಾನವ ಹಕ್ಕು ಮತ್ತು ಕರ್ತವ್ಯಗಳನ್ನು ಪಾಲಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಸಮಾಜದಲ್ಲಿ ಎಲ್ಲರು ಒಬ್ಬರಿಗೊಬ್ಬರು ಸಮಾನರು ಇಲ್ಲಿ ಯಾವುದೇ ತಾರತಮ್ಯಗಳಿಗೆ ಅವಕಾಶ ಮಾಡಿ ಕೊಡಬಾರದು ಎಂದು ಹೇಳಿದರು.

ಸುರತ್ಕಲ್ ಗೋವಿಂದ ದಾಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಆಶಾಲತಾ ಪಿ. ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ಮಾನವ ಹಕ್ಕುಗಳ ಪ್ರಾಮುಖ್ಯತೆಯ ಕುರಿತು ವಿಶೇಷ ಉಪನ್ಯಾಸವನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲರು ಪ್ರೊ.ಸೋಜನ್ ಕೆ.ಜಿ., ಮತ್ತು ಐಕ್ಯೂಎಸಿ ಸಂಚಾಲಕ ಪ್ರೊ.ಶ್ರೀಮತಿ ಅಡಿಗ ಉಪಸ್ಥಿತರಿದ್ದರು.

ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಮಾನವ ಹಕ್ಕು ಸಂಘದ ಸಂಚಾಲಕ ಮಂಜುನಾಥ ಸ್ವಾಗತಿಸಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ರಾಜೇಂದ್ರ ಕೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News