×
Ad

ಉಡುಪಿ | ಹಿರಿಯಡ್ಕದಲ್ಲಿ ಕಿಶೋರ ಯಕ್ಷ ಸಂಭ್ರಮ ಉದ್ಘಾಟನೆ

Update: 2025-12-04 21:03 IST

ಉಡುಪಿ, ಡಿ.4: ಯಕ್ಷಗಾನ ನಮ್ಮ ಹಿರಿಯರು ನಮಗೆ ನೀಡಿರುವ ಸರ್ವಾಂಗ ಸುಂದರ ಕಲಾಪ್ರಕಾರ. ಇದು ವಿದ್ಯಾರ್ಥಿಗಳಲ್ಲಿ ಭಾಷಾ ಕೌಶಲ್ಯ, ಪುರಾಣಜ್ಞಾನ, ಆತ್ಮಸ್ಥೈರ್ಯವನ್ನು ಬೆಳೆಸುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಸಂಸ್ಕಾರವಂತರನ್ನಾಗಿ ಮಾಡುತ್ತದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ ಅಭಿಪ್ರಾಯ ಪಟ್ಟಿದ್ದಾರೆ.

ಹಿರಿಯಡ್ಕದಲ್ಲಿ ಕಾಪು ಕ್ಷೇತ್ರದ ನಾಲ್ಕು ಶಾಲೆಗಳ ಪ್ರದರ್ಶನಗಳನ್ನು ಉದ್ಘಾಟಿಸಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಉಡುಪಿಯ ಯಕ್ಷ ಶಿಕ್ಷಣ ಟ್ರಸ್ಟ್ ಶ್ರೀವೀರಭದ್ರ ದೇವಸ್ಥಾನ ಹಿರಿಯಡಕ, ಪ್ರದರ್ಶನ ಸಂಘಟನಾ ಸಮಿತಿ ಹಿರಿಯಡಕ ಹಾಗೂ ಯಕ್ಷಗಾನ ಕಲಾರಂಗ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಈ ಪ್ರದರ್ಶನಗಳನ್ನು ಆಯೋಜಿಸಲಾಗಿದೆ.

ಸಮಾರಂಭದಲ್ಲಿ ಸೆಲ್ಕೋ ಸೋಲಾರ್ ಲೈಟ್ಸ್ನ ಹಿರಿಯ ಅಧಿಕಾರಿ ಗುರುಪ್ರಕಾಶ್ ಶೆಟ್ಟಿ, ಉದ್ಯಮಿ ಶ್ರೀನಿವಾಸ್ ರಾವ್, ಹಿರಿಯಡಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಭಟ್, ಮಣಿಪುರ ಸರಕಾರಿ ಸಂಯುಕ್ತ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ರೂಪರೇಖಾ ಅತಿಥಿಗಳಾಗಿ ಭಾಗವಹಿಸಿದ್ದರು.

ಟ್ರಸ್ಟಿ ವಿ.ಜಿ.ಶೆಟ್ಟಿ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ಮತ್ತು ಡಾ. ರಾಜೇಶ್ ನಾವುಡ ಕಾರ್ಯಕ್ರಮ ನಿರೂಪಿಸಿದರೆ, ಕಾರ್ಯದರ್ಶಿ ಮುರಲಿ ಕಡೆಕಾರ್ ವಂದಿಸಿದರು.

ಮೊದಲ ದಿನದಂದು ಸರಕಾರಿ ಪ್ರೌಢಶಾಲೆ ಮಣಿಪುರ ಇಲ್ಲಿನ ವಿದ್ಯಾರ್ಥಿ ಗಳಿಂದ ಕೃಷ್ಣಾರ್ಜುನ ಕಾಳಗ, ಬಳಿಕ ಹಿರಿಯಡ್ಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ವೀರಮಣಿ ಕಾಳಗ ಯಕ್ಷಗಾನ ಪ್ರದರ್ಶಿಸಲ್ಪಟ್ಟಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News