×
Ad

ಉಡುಪಿ | ಡಿ:13ರಂದು ಕಾರಂತರ ಅರಿವಿನ ಬೆಳಕು ಉಪನ್ಯಾಸ

Update: 2025-12-12 19:58 IST

ಉಡುಪಿ, ಡಿ.12: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಕಾರ್ಕಳದ ವೆಂಕಟರಮಣ ಮಹಿಳಾ ಕಾಲೇಜಿನ ಸಹಯೋಗದಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ-11ನೇ ಕಾರ್ಯಕ್ರಮ ಡಿ.13ರ ಶನಿವಾರ ಬೆಳಿಗ್ಗೆ 10:30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ಆಯೋಜನೆಗೊಂಡಿದೆ.

ಕಾರ್ಯಕ್ರಮವನ್ನು ಕಾರ್ಕಳ ಎಸ್.ವಿ.ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಕೆ.ಪಿ.ಶೆಣೈ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲೆ ಪ್ರೊ. ಗೀತಾ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಆಶಯ ನುಡಿಗಳನ್ನಾಡಲಿದ್ದಾರೆ.

ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಉಪನ್ಯಾಸಕಿ ಶಾಲಿನಿ ಯು.ಬಿ. ಕಾರಂತರ ಕಾದಂಬರಿಗಳ ಸಿನೆಮಾಗಳಲ್ಲಿ ಬದುಕಿನ ಅಭಿವ್ಯಕ್ತಿ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News