×
Ad

ಉಡುಪಿ | ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡಿಕೆ

Update: 2025-12-15 19:35 IST

ಉಡುಪಿ, ಡಿ.15: ಡಿ.21ರಂದು ಉಡುಪಿ ಅಂಬಲಪಾಡಿಯ ಶ್ರೀಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಬೇಕಿದ್ದ ಕರ್ನಾಟಕ ಯಕ್ಷಗಾನ ಅಕಾಡೆಮಿಯ 2025ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕಾರಣಾಂತರದಿಂದ ಮುಂದೂಡಲಾಗಿದೆ ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

ಕರ್ನಾಟಕ ಯಕ್ಷಗಾನ ಅಕಾಡೆಮಿ ನೀಡುವ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ಯಕ್ಷಸಿರಿ ಪ್ರಶಸ್ತಿ, ದಿ.ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಪ್ರಶಸ್ತಿ ಹಾಗೂ 2024ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಸಮಾರಂಭದ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಪ್ರಕಟಣೆ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News