×
Ad

ಉಡುಪಿ: ಲೋಕಾಯುಕ್ತ ಜನಸಂಪರ್ಕ ಸಭೆ

Update: 2023-11-08 21:50 IST

ಉಡುಪಿ: ಉಡುಪಿ ಜಿಲ್ಲಾ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷ ಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಇಂದು ನಗರದ ತಾಲೂಕು ಕಚೇರಿ ಸಭಾಂಗಮದಲ್ಲಿ ಜನಸಂಪರ್ಕ ಸಭೆ ನಡೆಸಿದರು.

ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕ ಸಿ.ಎ ಸೈಮನ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕ ಕೆ.ಸಿ ಪ್ರಕಾಶ್ ಹಾಗೂ ಪೊಲೀಸ್ ನಿರೀಕ್ಷಕ ಮಂಜುನಾಥ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.

ಲೋಕಾಯುಕ್ತ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಹೇಳಿಕೊಂಡರು. ಹಲವು ಮಂದಿ ಸರಕಾರಿ ಅಧಿಕಾರಿಗಳು ಹಾಗೂ ನೌಕರರ ವಿರುದ್ಧ ದೂರುಗಳನ್ನು ಸಲ್ಲಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News