ಉಡುಪಿ | ನಕಲಿ ಹುಲಿ ಉಗುರು ಮಾರಾಟ: ಆರೋಪಿ ಅರಣ್ಯ ಇಲಾಖೆಯ ವಶಕ್ಕೆ
Update: 2026-02-23 15:45 IST
ಉಡುಪಿ: ನಕಲಿ ಹುಲಿ ಉಗುರುಗಳನ್ನು ಅಸಲಿ ಎಂದು ನಂಬಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಉಡುಪಿ ಅರಣ್ಯ ಇಲಾಖೆಯವರು ವಶಕ್ಕೆ ಪಡೆದಿದ್ದಾರೆ.
ಸನ್ಯಾಸಿ ವೇಷದಲ್ಲಿದ್ದ ವಂಚಕ ಹುಲಿ ಉಗುರು ಅಸಲಿ ಎಂದು ನಂಬಿಸಿ ಮಾರಾಟಕ್ಕೆ ಯತ್ನಿಸುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ನಾಗರಿಕ ಸಮಿತಿಯ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ., ನಗರ ಠಾಣೆಯ ಪೊಲೀಸರು ಆರೋಪಿಯನ್ನು ನಗರದ ಹಳೆ ಬಸ್ಸು ನಿಲ್ದಾಣದ ಬಳಿ ವಶಕ್ಕೆ ಪಡೆದು ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.
ಕಾರ್ಯಚರಣೆಗೆ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಸಹಕರಿಸಿದ್ದಾರೆ.