ಉಡುಪಿ | ವಿದ್ಯುತ್ ಆಘಾತಕ್ಕೆ ವ್ಯಕ್ತಿ ಬಲಿ
Update: 2025-10-13 20:30 IST
ಉಡುಪಿ : ನಗರದ ಹೊರವಲಯದ ಬೈಲೂರಿನ ಹೊಲೋ ಬ್ಲಾಕ್ ಫ್ಯಾಕ್ಟರಿಯ ಮಾಲಕ ಸುನಿಲ್ ಸೋನ್ಸ್ (45) ಎಂಬವರು ವಿದ್ಯುತ್ ಆಘಾತದಿಂದ ಮೃತಪಟ್ಟ ಘಟನೆ ಇಂದು ಸಂಜೆ ವೇಳೆ ನಡೆದಿದೆ.
ಸುನಿಲ್ ಬೈಲೂರಿನಲ್ಲಿ ಕಳೆದ 22 ವರ್ಷಗಳಿಂದ ಸುನೀತಾ ಹೊಲೋ ಬ್ಲಾಕ್ ನಡೆಸುತ್ತಿದ್ದು, ಎಂದಿನಂತೆ ಕೆಲಸ ನಿರ್ವಹಿಸುತ್ತಿದ್ದಾಗ ವಿದ್ಯುತ್ ಶಾಕ್‌ಗೆ ಒಳಗಾಗಿದ್ದರು. ತಕ್ಷಣ ಸ್ಥಳೀಯರು ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ ಮತ್ತು ಓರ್ವ ಪುತ್ರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.